ಬಿಜೆಪಿ ಮುನ್ನಡೆ ಕನಸಿಗೆ ಮೈತ್ರಿ ಬ್ರೇಕ್‌?

•ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ 38,940 ಮತಗಳ ಲೀಡ್‌ಕೊಟ್ಟ ಕ್ಷೇತ್ರ

Team Udayavani, Apr 27, 2019, 1:25 PM IST

27-April-20

ಚಿತ್ರದುರ್ಗ: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಅರೆ ಮಲೆನಾಡು. ಈ ಬಾರಿ ಇಲ್ಲಿ ಶೇ.72.71ರಷ್ಟು ಮತದಾನವಾಗಿದೆ. ಸರಾಸರಿ ಮತದಾನಕ್ಕಿಂತ ಶೇ.2.07ರಷ್ಟು ಮತದಾನ ಹೆಚ್ಚಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಮತ ಲಭಿಸಿರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ 11 ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 38,940 ಲೀಡ್‌ ಪಡೆದು ಆಯ್ಕೆಯಾಗಿದ್ದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಭಾರೀ ಲೀಡ್‌ ದೊರಕುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿಯಲ್ಲಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕೇವಲ 3553 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ನೇರ ಹಣಾಹಣಿ ನಡೆದಿದ್ದು, ಯಾರು ಗೆಲ್ಲಲಿದ್ದಾರೆ ಎಂಬ ಚರ್ಚೆ ನಡೆದಿದೆ.

ಬಿಜೆಪಿಯಲ್ಲೇ ಅಸಮಾಧಾನ?: ಮೈತ್ರಿ ಅಭ್ಯರ್ಥಿ ಪರ ಕ್ಷೇತ್ರದ ಮತದಾರರಲ್ಲಿ ಮೃಧು ಧೋರಣೆ ಇದೆ. ಇದು ಸ್ವಲ್ಪ ಮತವಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ ಎಂದು ಸ್ವತಃ ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಇದರ ಮಧ್ಯೆ ಈ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ತನ್ನ ಪುತ್ರನಿಗೆ ಲೋಕಸಭೆಯಲ್ಲಿ ಟಿಕೆಟ್ ಕೊಡಿಸಿ ಗೆಲ್ಲಿಸುವ ಇರಾದೆ ಹೊಂದಿದ್ದರು. ಆದರೆ ಇವರ ಪುತ್ರನಿಗೆ ಸೇರಿದಂತೆ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ ಎನ್ನುವ ಅಸಮಾಧಾನ ಕೂಡ ಶಾಸಕರು ಸೇರಿದಂತೆ ಇಡೀ ಭೋವಿ ಸಮುದಾಯಕ್ಕಿದ್ದು, ಇದಕ್ಕಾಗಿ ಚುನಾವಣೆಯಲ್ಲಿ ಈ ಸಮುದಾಯ ಸೇರಿದಂತೆ ಲಂಬಾಣಿ ಮತ್ತಿತರ ಎಸ್‌ಸಿ ಸಮುದಾಯಗಳು ಬಿಜೆಪಿ ವಿರುದ್ಧ ಮತ ಚಲಾಯಿಸಿವೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಮೋದಿ-ಬಿಎಸ್‌ವೈ ಅಲೆ: ಇನ್ನೊಂದೆಡೆ ಕ್ಷೇತ್ರದಲ್ಲಿ ಯಾರು ಕೆಲಸ ಮಾಡಲಿ, ಬಿಡಲಿ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು ಯಡಿಯೂರಪ್ಪ ಮತ್ತು ಮೋದಿ ಅಲೆಯಿಂದಾಗಿ ಹೆಚ್ಚಿನ ಮತಗಳು ಬಿಜೆಪಿ ಅಭ್ಯರ್ಥಿಗೆ ಬಿದ್ದಿವೆ ಎಂದು ಬಹುತೇಕ ಬೂತ್‌ಗಳಲ್ಲಿ ಮತದಾರರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಅಲ್ಲದೆ, ಹೆಚ್ಚಿನ ಲೀಡ್‌ ಪಡೆದಿರುವ ಕುರಿತು ಬೆಟ್ಟಿಂಗ್‌ ಕೂಡ ನಡೆದಿದೆ ಎನ್ನುವುದು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.

ಕಡಿಮೆ ಮತದಾನ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.83.29 ರಷ್ಟು ಮತದಾನವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಶೇ.72.71ರಷ್ಟು ಮತದಾನ ಆಗುವ ಮೂಲಕ ಶೇ.10.58ರಷ್ಟು ಕಡಿಮೆ ಮತದಾನವಾಗಿದ್ದು, ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರಲಿದೆ ಎನ್ನುವ ಚರ್ಚೆ ಗಂಭೀರವಾಗಿ ನಡೆಯುತ್ತಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ 297 ಮತಗಟ್ಟೆಗಳಲ್ಲಿ 227510 ಮತದಾರರಿದ್ದು, ಆ ಪೈಕಿ 165433 ಜನ ಮತ ಚಲಾಯಿಸಿ ಶೇ.72.71ರಷ್ಟು ಮತದಾನ ನಡೆದಿದೆ. ಈ ಕ್ಷೇತ್ರದಲ್ಲಿ 86927 ಪುರುಷರು ಹಾಗೂ 78506 ಮಹಿಳೆಯರು ಮತ ಚಲಾಯಿಸಿದ್ದಾರೆ.

ಮತದಾನದ ಚಿತ್ರಣ: ಹೊಳಲ್ಕೆರೆ ತಾಲೂಕಿನ ಲಿಂಗವ್ವನಾಗತಿಹಳ್ಳಿಯಲ್ಲಿ ಶೇ. 91. 94ರಷ್ಟು ಅತಿ ಹೆಚ್ಚು ಮತದಾನವಾಗುವ ಮೂಲಕ ಬೇರೆ ಗ್ರಾಮಗಳಿಗೆ ಮಾದರಿಯಾಗಿದೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 63ರಲ್ಲಿ ಪುರುಷರು-170, ಮಹಿಳೆಯರು-165, ಒಟ್ಟು- 335 ಮತದಾರರ ಪೈಕಿ ಪುರುಷರು-161, ಮಹಿಳೆಯರು-147 ಒಟ್ಟು 308 ಮತದಾರರು ಮತ ಚಲಾಯಿಸಿದ್ದಾರೆ. ಇದೇ ತಾಲೂಕಿನ ಪಂಜಯ್ಯನಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂ.29ರಲ್ಲಿ ಕೇವಲ ಶೇ.0.52ರಷ್ಟು ಮತದಾನವಾಗಿದ್ದು, ಇಲ್ಲಿ ಮತದಾನ ಬಹಿಷ್ಕರಿಸಲಾಗಿತ್ತು. ಈ ಮತಗಟ್ಟೆಯಲ್ಲಿ ಪುರುಷರು-297, ಮಹಿಳೆಯರು-282 ಒಟ್ಟು- 579 ಮತದಾರರಿದ್ದು, ಇಬ್ಬರು ಪುರುಷರು, ಓರ್ವ ಮಹಿಳೆ ಸೇರಿದಂತೆ ಒಟ್ಟು 3 ಮತದಾರರು ಮತದಾನ ಮಾಡಿದ್ದಾರೆ. ಇದನ್ನು ಹೊರತುಪಡಿಸಿ, ನೇರಲಕಟ್ಟೆ ಸರ್ಕಾರಿ ಕಿ.ಪ್ರಾ.ಶಾಲೆ ಮತಗಟ್ಟೆ ಸಂಖ್ಯೆ 247ರಲ್ಲಿ ಶೇ.57.19ರಷ್ಟು ಕಡಿಮೆ ಮತದಾನವಾಗಿದೆ. ಕೇವಲ ಶೇ.0.52ರಷ್ಟು ಕನಿಷ್ಠ ಮತದಾನವಾದ ಗ್ರಾಮ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.