11 ಕೋವಿಡ್ ಹೆಲ್ತ್‌ಕೇರ್ ಸೆಂಟರ್: ಡಿಎಚ್‌ಒ ಪಾಲಾಕ್ಷ
Team Udayavani, May 15, 2020, 6:20 AM IST
ಚಿತ್ರದುರ್ಗ: ಜಿಲ್ಲೆಯಲ್ಲಿ 15 ಹಾಸಿಗೆಗಳ 11 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಿರುವ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗಳನ್ನಾಗಿ ಪರಿವರ್ತಿಸಿ ಅಗತ್ಯ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದರು.
ಗುರುವಾರ ಹಿರಿಯೂರು ತಾಲೂಕು ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಜಿಲ್ಲಾಡಳಿತದ ನಿರ್ದೇಶನದಂತೆ ಕೋವಿಡ್ ವೈರಸ್ ಹತೋಟಿಗೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಹಿರಿಯೂರು ತಾಲೂಕಿನ ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೂ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹಾಗೂ ಸೋಂಕಿತ ಪ್ರದೇಶಗಳಿಂದ ಬಂದಿರುವವರ ಪಟ್ಟಿ ಮಾಡುತ್ತಿದ್ದಾರೆ. ಮನೆಯಲ್ಲಿ ಪ್ರತ್ಯೇಕವಾಗಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವುದರ ಜೊತೆಗೆ ಕೆಮ್ಮು, ನೆಗಡಿ, ಶೀತದಂತಹ ಲಕ್ಷಣ ಇರುವವರನ್ನೂ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ವೆಂಕಟೇಶ್, ಡಾ| ಕಾಶಿ, ಆಡಳಿತ ವೈದ್ಯಾಧಿಕಾರಿ ಡಾ| ರವಿಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಜಾನಕಿ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ಹನುಮಂತಪ್ಪ, ಡಾ| ಶ್ರೀದೇವಿ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.