ಹಿಂದಿ ಪರೀಕ್ಷೆಗೆ 1300 ವಿದ್ಯಾರ್ಥಿಗಳು ಗೈರು
Team Udayavani, Jul 4, 2020, 10:00 AM IST
ಚಿತ್ರದುರ್ಗ: ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ತೃತೀಯ ಭಾಷಾ ವಿಷಯದ ಪರೀಕ್ಷೆಗೆ ಒಟ್ಟು 20689 ವಿದ್ಯಾರ್ಥಿಗಳು ಹಾಜರಾಗಿದ್ದು, 1300 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ಹಾಗೂ ನೆರೆ ರಾಜ್ಯದ ವಿದ್ಯಾರ್ಥಿಗಳು, ವಲಸೆ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21989 ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20689 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 1300 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗೈರಾದವರಲ್ಲಿ ಚಳ್ಳಕೆರೆ ತಾಲೂಕಿನಲ್ಲಿ 244, ಚಿತ್ರದುರ್ಗ-348, ಹೊಸದುರ್ಗ-248, ಹೊಳಲ್ಕೆರೆ-166, ಹಿರಿಯೂರು-201 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 93 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಂಟೇನ್ಮೆಂಟ್ ಪ್ರದೇಶಗಳಿಂದ ಬಂದ 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 11 ವಿದ್ಯಾರ್ಥಿಗಳನ್ನು ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ನೆರೆ ರಾಜ್ಯಗಳಿಂದ ಬಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 349 ವಲಸೆ ವಿದ್ಯಾರ್ಥಿಗಳಲ್ಲಿ 343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 6 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸರ್ಕಾರಿ ವಸತಿ ಶಾಲೆಗಳಲ್ಲಿ ಉಳಿದುಕೊಂಡಿದ್ದ 304 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಯೂ ಪರೀಕ್ಷಾ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.