22 ಜನರಿಗೆ ಕೋವಿಡ್
Team Udayavani, Dec 31, 2020, 4:21 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 22 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,282 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 14 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬುಧವಾರ ಒಟ್ಟು 2414 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಈವರೆಗೆ 68 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ
ಸೋಂಕಿತರ ಪೈಕಿ ಈಗಾಗಲೆ 14,146 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 68 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,13,841 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 2,18,612 ಜನರ ಮಾದರಿ ಸಂಗ್ರಹಿಸಲಾಗಿದ್ದು, 2,02,744 ಜನರ ವರದಿ ನೆಗೆಟಿವ್ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.