55 ಜನರಿಗೆ ಕೋವಿಡ್ ಸೋಂಕು
Team Udayavani, Aug 7, 2020, 4:23 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‌ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 55 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 892ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಜಿಲ್ಲೆಯ ವಿವಿಧೆಡೆ 8 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಗುರುವಾರ ಚಿತ್ರದುರ್ಗ ತಾಲೂಕಿನಲ್ಲಿ 4, ಹೊಳಲ್ಕೆರೆ 23, ಹಿರಿಯೂರು 5, ಚಳ್ಳಕೆರೆ 4, ಹೊಸದುರ್ಗ15 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 4 ಸೇರಿ ಒಟ್ಟು 55 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 16 ಜನರು ಮೃತಪಟ್ಟಿದ್ದು, 480 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ398 ಸಕ್ರಿಯ ಪ್ರಕರಣಗಳಿವೆ.
ನಾಯಕನಹಟ್ಟಿಯಲ್ಲಿ ಮೂವರಿಗೆ ಪಾಸಿಟಿವ್ : ಪಟ್ಟಣದಲ್ಲಿ ಗುರುವಾರ ಮೂರು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬುಧವಾರ ಎರಡು ಹಾಗೂ ಇಂದು ಮೂರು ಪ್ರಕರಣಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ 23 ಜನರಿಗೆ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸಲಾಗಿದ್ದು, ಮೂರು ಜನರಿಗೆ ಪಾಸಿಟಿವ್ ಕಂಡು ಬಂದಿದೆ. ಕಳೆದ ಹತ್ತು ದಿನಗಳಲ್ಲಿ ಪಟ್ಟಣದಲ್ಲಿ 8 ಪ್ರಕರಣಗಳು ವರದಿಯಾಗಿವೆ. ಬುಧವಾರ ಪಾಸಿಟಿವ್ ಬಂದಿದ್ದ ವ್ಯಕ್ತಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಗುರುವಾರ ಪರೀಕ್ಷೆಗೆ ಒಳಪಡಿಸಿದಾಗ ಮತ್ತಿಬ್ಬರಿಗೆ ಸೋಂಕು ದೃಢಪಟ್ಟಿದೆ. ಮುರುಡೇಶ್ವರ ಮೂಲದ ಒಬ್ಬ ವ್ಯಕ್ತಿಯಿಂದ ಇನ್ನಿಬ್ಬರಿಗೆ ಸೋಂಕು ತಗುಲಿದೆ ಎಂದು ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಓಬಣ್ಣ ತಿಳಿಸಿದ್ದಾರೆ.
ಪಟ್ಟಣದ ಸಮೀಪದಲ್ಲಿ ವೈಜ್ಞಾನಿಕ ಸಂಸ್ಥೆಗಳು ಹಾಗೂ ಹಳ್ಳಿಗಳ ಸಂಖ್ಯೆ ಜಾಸ್ತಿ ಇದೆ. ಪ್ರತಿನಿತ್ಯ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಹೀಗಾಗಿ ಪಟ್ಟಣದಲ್ಲಿ ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಕಂಟೈನ್ಮೆಂಟ್ ವಲಯಗಳಲ್ಲಿ ಬಿಗಿಯಾದ ಸೀಲ್ ಡೌನ್ ಮಾಡಬೇಕು. ದ್ರಾವಣ ಸಿಂಪಡಣೆ ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ಪಪಂ ಸದಸ್ಯರಾದ ಜೆ.ಆರ್. ರವಿಕುಮಾರ್, ಎಸ್. ಉಮಾಪತಿ, ಮಂಜುಳಾ ಶ್ರೀಕಾಂತ್, ಜಿ.ಟಿ.ಎಸ್. ತಿಪ್ಪೇಸ್ವಾಮಿ ಅವರು ಪಪಂ ಹಾಗೂ ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.