ಕನ್ನಡ ನಾಡಿನ ಹಿರಿಮೆ ಅಪಾರ: ಮುರಾರ್ಜಿ
Team Udayavani, Nov 2, 2020, 7:27 PM IST
ಮೊಳಕಾಲ್ಮೂರು: ಕರ್ನಾಟಕದ ಸಮಸ್ತ ಕನ್ನಡದ ಮನಸ್ಸುಗಳನ್ನು ಏಕೀಕರಣದ ಚಳವಳಿಗೆ ಧುಮಕಲು ಹೋರಾಟಗಾರರು, ಸಾಹಿತಿಗಳು ಹಾಗೂ ಹಲವಾರು ಮಹನೀಯರು ಪ್ರೇರಣೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಿ.ಒ. ಮುರಾರ್ಜಿ ಮಾತನಾಡಿದರು.
ಪಟ್ಟಣದ ಕನ್ನಡ ಭವನದ ಆವರಣದಲ್ಲಿ ಕನ್ನಡಸಾಹಿತ್ಯ ಪರಿಷತ್ ಹಾಗೂ ಕನ್ನಡ ರಕ್ಷಣಾ ವೇದಿಕೆಯಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹಲವಾರು ದಾರ್ಶನಿಕರು, ಸಾಹಿತಿಗಳು, ಸಂತರು, ಕವಿಗಳು, ಕಲಾವಿದರು ಸೇರಿದಂತೆ ಮೊದಲಾದವರು ಕನ್ನಡ ಭಾಷೆಯ ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿ ನಾಡಿನ ಕನ್ನಡ ಭಾಷೆಯನ್ನು ಉತ್ತುಂಗ ಶಿಖರಕ್ಕೆ ಕೊಂಡೊಯ್ದಿದ್ದಾರೆ. ರಾಷ್ಟ್ರ ಕವಿ ಕುವೆಂಪುರವರು ಕನ್ನಡ ನಾಡಿಗೆ ನಾಡಗೀತೆ ರಚನೆಯಲ್ಲಿ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಎಲ್ಲಾ ಧರ್ಮಗಳು, ಜಾತಿಗಳ ಸಮುದಾಯಗಳು ಸಹೋರತ್ವ ಭಾವನೆಯಿಂದ ಭಾಳುತ್ತಿದ್ದಾರೆಂದು ಬಣ್ಣಿಸಿದ್ದಾರೆ. ಕನ್ನಡಾಂಬೆಯು ಭಾರತ ಮಾತೆಗೆ ಹಿರಿಯ ಮಗಳಾಗಿ ಮೇರು ಶಿಖರಕ್ಕೇರಲಾಗಿದೆ.
ಕರ್ನಾಟಕದ 8 ಜನ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿ ಪಡೆದು ನಾಡಿಗೆ ಕೀರ್ತಿ ಗಳಿಸಿದ್ದಾರೆ. ಅಲ್ಲಲ್ಲಿ ಪ್ರತ್ಯೇಕತೆಯ ಕೂಗು ಕೇಳಿ ಬಂದರೂ ಅಖಂಡ ಕರ್ನಾಟಕದೊಂದಿಗೆ ಮುಂದುವರೆಯಲಿದೆ. ಮಾತೃಭಾಷೆಯಾದ ಕನ್ನಡವನ್ನು ಆಡಳಿತ ಭಾಷೆಯಾಗಿ ಕನ್ನಡವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಸಾಹಿತ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಕನ್ನಡ ಭಾಷೆ, ಕಲೆ ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಿಸಿ ಉಳಿಸಿ ಬೆಳೆಸಬೇಕೆಂದರು.ಕಸಾಪ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಎಂ.ಡಿ. ಲತೀಪ್ ಸಾಬ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಪಂ ಸದಸ್ಯೆ ಶುಭಾ ಡಿಶ್ ರಾಜ್, ಕರವೇ ಅದ್ಯಕ್ಷ ಸೂರಮ್ಮನಹಳ್ಳಿ ನಾಗರಾಜ್, ಕಸಾಪ ಕೋಶಾಧ್ಯಕ್ಷ ಕೆ. ಶಾಂತವೀರಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ನೀಲರಾಜ್, ಸದಸ್ಯರಾದ ವನಿತಾ ಗಿರೀಶ್, ಸಂಗೀತ ಶಿಕ್ಷಕಿ ಸ್ನೇಹಾ ರಾಘವೇಂದ್ರ, ಭರತನಾಟ್ಯ ಕಲಾವಿದೆ ಜ್ಯೋತಿ ನಾಗೇಶ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸರ್ವಮಂಗಳ ಮೊದಲಾದವರ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.