ಹಿರಿಯೂರಿನ 7 ಮಂದಿಗೆ ಸೋಂಕು ದೃಢ
Team Udayavani, Jun 29, 2020, 10:07 AM IST
ಚಿತ್ರದುರ್ಗ: ಹಿರಿಯೂರು ನಗರದ ಏಳು ಜನರಿಗೆ ಕೋವಿಡ್ ಸೋಂಕು ತಗುಲಿರುವುದು ಭಾನುವಾರದ ವರದಿಯಲ್ಲಿ ದೃಢಪಟ್ಟಿದೆ.
ಹಿರಿಯೂರು ನಗರದ 58 ವರ್ಷದ ಮಹಿಳೆ (ಪಿ-11956), 28 ವರ್ಷದ ಪುರುಷ (ಪಿ-11957), 21 ವರ್ಷದ ಪುರುಷ (ಪಿ-11958), 21 ವರ್ಷದ ಪುರುಷ (ಪಿ-11959), 19 ವರ್ಷದ ಪುರುಷ (ಪಿ-11960), 96 ವರ್ಷದ ವೃದ್ಧೆ (ಪಿ-11961), 38 ವರ್ಷದ ಪುರುಷ (ಪಿ-11962) ಸೇರಿದಂತೆ ಒಟ್ಟು ಏಳು ಮಂದಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.
ಸೋಂಕಿತರನ್ನು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಹಾಗೂ ಧರ್ಮಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರ ಮಾಹಿತಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಭಾನುವಾರ 69 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 57 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 4 ಜನರ ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 2673 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆಯಾಗಿದ್ದು, ಈ ಪೈಕಿ 43 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ಇದುವರೆಗೆ 4881 ಜನರ ಮಾದರಿ ಸಂಗ್ರಹಿಸಲಾಗಿದ್ದು, 4667 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 153 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.