ಲೈಂಗಿಕ ಕಿರುಕುಳ ಕೇಸ್: ಮುರುಘಾ ಶರಣರಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ
Team Udayavani, Sep 5, 2022, 11:33 AM IST
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಪೊಲೀಸ್ ಕಸ್ಟಡಿ ಅವಧಿ ಮಗಿದ ಕಾರಣ ಚಿತ್ರದುರ್ಗ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾ.ಕೋಮಲಾ ಅವರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
ರವಿವಾರ ಮುರುಘಾ ಶರಣರನ್ನು ಮಠಕ್ಕೆ ಕರೆತಂದು ಸ್ಥಳ ಮಹಜರು ನಡೆಸಲಾಗಿತ್ತು. ಬಿಗಿ ಭದ್ರತೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಕರೆತಂದ ಪೊಲೀಸರು, 2.30ರ ವರೆಗೆ ಸ್ಥಳ ಮಹಜರು ನಡೆಸಿದ್ದಾರೆ. ಈ ಸಂದರ್ಭ ಮಠದ ಸುತ್ತಮುತ್ತಲೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮಾಧ್ಯಮದವರನ್ನು ಮಠದ ಮುಖ್ಯ ದ್ವಾರದ ಬಳಿಯೇ ತಡೆದಿದ್ದ ಪೊಲೀಸರು, ಶ್ರೀಗಳ ಮುಖ ಕಾಣದಂತೆ ಪೊಲೀಸ್ ವಾಹನದ ಸುತ್ತಲೂ ಬಟ್ಟೆಯಿಂದ ಮುಚ್ಚಲಾಗಿತ್ತು. ಮುಂಭಾಗದಲ್ಲಿ ಪೊಲೀಸ್ ಸಿಬಂದಿ ನಿಂತು ಶ್ರೀಗಳು ಕಾಣದಂತೆ ಮರೆ ಮಾಡಿಕೊಂಡು ಮಠದಿಂದ ವಾಪಸ್ ಡಿವೈಎಸ್‌ಪಿ ಕಚೇರಿಗೆ ಕರೆತಂದಿದ್ದರು.
ಇದನ್ನೂ ಓದಿ:ಮಠದ ಆವರಣದಲ್ಲೇ ನೇಣಿಗೆ ಶರಣಾದ ಮಡಿವಾಳೇಶ್ವರ ಮಠದ ಬಸವಸಿದ್ದಲಿಂಗ ಮಹಾಸ್ವಾಮೀಜಿ
ಮಠದಲ್ಲಿ ಸ್ವಾಮೀಜಿ ವಾಸ್ತವ್ಯವಿರುವ ಕೊಠಡಿಯಲ್ಲೂ ಪೊಲೀಸರು ಶೋಧ ನಡೆ ಸಿದ್ದು, ತನಿಖೆಗೆ ಸಂಬಂಧಪಟ್ಟ ಕೆಲವು ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿದ್ಯಾರ್ಥಿನಿ ನಿಲಯದಲ್ಲಿ ಈಗಾಗಲೇ ಸ್ಥಳ ಮಹಜರು ಮಾಡಲಾಗಿದೆ.
ಸೆ.7ಕ್ಕೆ ಜಾಮೀನು ಅರ್ಜಿ ವಿಚಾರಣೆ: ಜಾಮೀನು ಕೋರಿ ಶ್ರೀಗಳು ಶನಿವಾರ ಸಲ್ಲಿಸಿರುವ ಜಾಮೀನು ಅರ್ಜಿ ಸೆ.7ರಂದ ವಿಚಾರಣೆಗೆ ಬರಲಿದೆ. ಸರಕಾರಿ ಅಭಿಯೋಜಕರು ತಕರಾರು ಆಕ್ಷೇಪಣೆ ಸಲ್ಲಿಸಿದ ಬಳಿಕ ವಿಚಾರಣೆ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.