ಕೆರೆ ಅತಿಕ್ರಮಣ ತೆರವಿಗೆ ಕ್ರಮ: ಜಿಲ್ಲಾಧಿಕಾರಿ
Team Udayavani, Dec 1, 2019, 2:52 PM IST
ಚಿತ್ರದುರ್ಗ: ಜಿಲ್ಲೆಯಲ್ಲಿನ ಎಲ್ಲ ಕೆರೆಗಳ ವಿಸ್ತೀರ್ಣ ಅಳತೆ ಮಾಡಿ ಒತ್ತುವರಿ ತೆರವು ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ರೈತ ಮುಖಂಡ ಭೂತಯ್ಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಅವರು, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಹಾಗೂವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಲ್ಲ ಕೆರೆಗಳ ವ್ಯಾಪ್ತಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಅಳತೆಮಾಡಿಸಲಾಗುವುದು. ಒಂದು ವೇಳೆ ಒತ್ತುವರಿಕಂಡುಬಂದಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರೈತ ಮುಖಂಡ ಭೂತಯ್ಯ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾದ ಕಾರಣ ರೈತರುಸಂತಸಗೊಂಡಿದ್ದಾರೆ. ಶೇಂಗಾ ಬೆಳೆಉತ್ತಮವಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ಲಾಭಸಿಗುವಂತಾಗಲಿ. ಸರ್ಕಾರ ಈಗಾಗಲೆ ಶೇಂಗಾಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಇದರನ್ವಯ ಜಿಲ್ಲೆಯಲ್ಲಿ ಕೂಡಲೆ ಶೇಂಗಾ ಖರೀದಿ ಕೇಂದ್ರ ಪ್ರಾರಂಭಿಸಬೇಕು.
ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗ ಪ್ರಾರಂಭವಾಗಿ ಎರಡು ವರ್ಷಗಳಾಗಿದ್ದರೂ ಒಂದೂ ಹೊಸ ಬಸ್ ಬಿಟ್ಟಿಲ್ಲ. ಇರುವ ಹಳೆಯ ಬಸ್‌ಗಳು ಪದೇ ಪದೇಅಪಘಾತಕ್ಕೆ ತುತ್ತಾಗುತ್ತಿವೆ. ಇನ್ನಾದರೂ, ಜಿಲ್ಲೆಗೆ ಹೊಸ ಬಸ್‌ಗಳನ್ನು ಪಡೆಯಲು ಕ್ರಮ ಕೈಗೊಳ್ಳಬೇಕು.2018ನೇ ಸಾಲಿನ ಬೆಳೆ ವಿಮೆ ಇದುವರೆಗೂ ರೈತರ ಕೈಸೇರಿಲ್ಲ. ಬೆಳೆ ನಷ್ಟ ಪರಿಹಾರದ ಇನ್‌ಫುಟ್ ಸಬ್ಸಿಡಿ ಮೊತ್ತ ಜಿಲ್ಲೆಯಲ್ಲಿ ಸುಮಾರು ಶೇ. 30 ರಷ್ಟು ರೈತರಿಗೆ ಪಾವತಿಯಾಗಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಸಂಬಂಧಪಟ್ಟರೈತರಿಗೆ ಇನ್‌ಫುಟ್ ಸಬ್ಸಿಡಿ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಸೋಮವಾರ ಜಿಲ್ಲಾ ಕಾರ್ಯಪಡೆ ಸಮಿತಿಸಭೆ ನಡೆಯಲಿದೆ. ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿಶೇಂಗಾ ಖರೀದಿ ಕೇಂದ್ರ ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಉಳಿದಂತೆ ಬೆಳೆ ವಿಮೆ ಹಾಗೂಇನ್‌ಫುಟ್ ಸಬ್ಸಿಡಿ ಪಾವತಿ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಜನಸ್ಪಂದನ ಸಭೆಗೆ ಆಗಮಿಸಿದ್ದ ಬಿ.ಎಸ್. ವೀರೇಶ್ ಎನ್ನುವವರು ತಾವು ಉಜ್ವಲಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್‌ಪಡೆದುಕೊಂಡಿದ್ದೇವೆ. ತಮ್ಮ ಕುಟುಂಬ ಇದೀಗ ಚಿತ್ರದುರ್ಗದಿಂದ ಚಳ್ಳಕೆರೆಗೆ ಸ್ಥಳಾಂತರಗೊಂಡಿದೆ. ಗ್ಯಾಸ್ ಏಜೆನ್ಸಿಯವರು ಸಿಲಿಂಡರ್ ಅನ್ನು ಚಳ್ಳಕೆರೆಗೆ ವರ್ಗಾವಣೆ ಮಾಡಿಕೊಡುತ್ತಿಲ್ಲ ಎಂದು ದೂರುನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು,ಸಮಸ್ಯೆಯನ್ನು ಕೂಡಲೆ ಪರಿಹರಿಸಿ. ಸಿಲಿಂಡರ್ ಅನ್ನುಚಳ್ಳಕೆರೆಗೆ ವರ್ಗಾಯಿಸಿಕೊಂಡುವಂತೆ ನಗರಸಭೆಪೌರಾಯುಕ್ತರಿಗೆ ಸೂಚನೆ ನೀಡಿದರು.
ಚಿತ್ರದುರ್ಗದ ತಿಪ್ಪಮ್ಮ ಎಂಬುವವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಗರಸಭೆಯಲ್ಲಿ ಅಕ್ರಮವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರದಾಖಲೆ ಪರಿಶೀಲಿಸಿ ಸೇವೆಯಿಂದ ಅಮಾನತು? ಮಾಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅಕ್ರಮವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರ ವಿರುದ್ಧ ತನಿಖೆ ಕೈಗೊಂಡು ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.
ಚಿತ್ರದುರ್ಗ ಆರ್. ವೆಂಕಟೇಶ್ ಅವರು ತೋಟಗಾರಿಕೆ ಇಲಾಖೆಯಲ್ಲಿ ಕಾಳು ಮೆಣಸಿನ ಬೆಳೆಗೆ ಸಹಾಯಧನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು. ವೆಂಕಟೇಶ್ವರಸ್ವಾಮಿ ದೇವಾಲಯದ ಸಮಿತಿ ಸದಸ್ಯರು ಹಿರೇಹಳ್ಳಿ ಗೊಲ್ಲರ ಕಪಿಲೆಯ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಸ್ಥಳಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.