ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಶ್ರಮಿಸಿ
Team Udayavani, Mar 3, 2019, 12:19 PM IST
ಹೊಳಲ್ಕೆರೆ: ಪಟ್ಟಣದ ಗಣಪತಿ ಕಲ್ಯಾಣ ಮಂಟಪದ ಬಳಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಕಮಲ ಸಂಕಲ್ಪ ಬೈಕ್ ರ್ಯಾಲಿಗೆ ಶನಿವಾರ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರು ಪ್ರಧಾನಿ ಮೊದಿ ನೇತೃತ್ವದ ಕೇಂದ್ರ ಸರಕಾರ ದೇಶದ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಅರಿವು ಮೂಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಜಗದೀಶ್, ಜಿಪಂ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಎಲ್.ಬಿ.ರಾಜಶೇಖರ್, ರಾಮಗಿರಿ ರಾಮಣ್ಣ, ಯುವಕ ಘಟಕದ ಅಧ್ಯಕ್ಷ ಆಶೋಕ್, ಉಪಾಧ್ಯಕ್ಷ ವಿಕಾಸ್, ನಗರಾಧ್ಯಕ್ಷ ಬಸವರಾಜ್, ಮಹೇಶ್, ಕೆ.ಆರ್.ರಾಜಪ್ಪ, ಬಸವರಾಜ್ ಯಾದವ್ ಇನ್ನಿತರರಿದ್ದರು. ಗಣಪತಿ ಕಲ್ಯಾಣ ಮಂಟಪದಿಂದ ಆರಂಭವಾದ ಬೈಕ್ ರ್ಯಾಲಿ ತಾಲೂಕಿನ ಗುಂಡೇರಿ,
ಎನ್.ಜಿ.ಹಳ್ಳಿ, ರಾಮಗಿರಿ, ದುಮ್ಮಿ, ದೊಗ್ಗನಾಳ್, ಮಲ್ಲಾಡಿಹಳ್ಳಿ, ಶಿವಪುರ, ಚಿಕ್ಕಜಾಜೂರು, ಅರಸನಘಟ್ಟ, ಚಿಕ್ಕಂದವಾಡಿ, ಅಮೃತಪುರ ಚಿತ್ರಹಳ್ಳಿ, ಶಿವಗಂಗ, ತಾಳ್ಯ, ಕಣಿವೆ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.