ಆದರ್ಶ ವ್ಯಕ್ತಿಗಳ ಸದ್ಗುಣ ಅಳವಡಿಸಿಕೊಳ್ಳಿ
Team Udayavani, Jan 24, 2019, 10:54 AM IST
ಮೊಳಕಾಲ್ಮೂರು: ಯುವ ಸಮುದಾಯ ಆದರ್ಶ ವ್ಯಕ್ತಿಗಳ ಸದ್ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತನ್ನ ಕಾಯಕದ ಗುರಿಯ ಸಾಧನೆಯೊಂದಿಗೆ ಉನ್ನತ ಸ್ಥಾನಮಾನ ಪಡೆದು ಆದರ್ಶ ವ್ಯಕ್ತಿಗಳಾಗಿ ಹೊರ ಹೊಮ್ಮಬೇಕೆಂದು ಹರಿಹರದ ಶ್ರೀರಾಮಕೃಷ್ಣ ಆಶ್ರಮದ ಶ್ರೀಶಾರದೇಶನಂದಜೀ ಸ್ವಾಮೀಜಿ ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಆದರ್ಶ ವಿದ್ಯಾಲಯದ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲೇ ನಿರ್ದಿಷ್ಟವಾದ ಗುರಿಮುಟ್ಟಲು ಎಲ್ಲಾ ವಿಷಯಗಳಲ್ಲೂ ಸತತವಾಗಿ ಅಭ್ಯಾಸ ಮಾಡಿ ಯಶಸ್ಸು ಪಡೆಯಬೇಕೆಂದು ಸಲಹೆ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರಬೋಸ್, ಕಾಯಕ ಯೋಗಿ ಡಾ| ಶಿವಕುಮಾರ ಸ್ವಾಮೀಜಿ, ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ, ಕೃಷ್ಣ ಗೋಪಾಲ ತಿವಾರಿ ಹಾಗೂ ಇನ್ನಿತರ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಅಚಲವಾದ ನಂಬಿಕೆ ಮತ್ತು ವಿಶ್ವಾಸದಿಂದ ಕಾಯಕ ಕೈಗೊಂಡರೆ ಗುರಿ ಸಾಧಿಸಬಹುದಾಗಿದೆ. ಈ ಸಾಧನೆಯ ಕಾರ್ಯದಲ್ಲಿ ತಂದೆ-ತಾಯಿ, ಗುರು, ಹಿರಿಯರು ಹಾಗೂ ಸಮಾಜದ ಸಹಕಾರವಿರುತ್ತದೆ. ಶಾಲಾ ವಿದ್ಯಾರ್ಥಿಗಳು ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಜೆ.ಸಿ. ರಾಜಶೇಖರ್ ಮಾತನಾಡಿ, ನೇತಾಜಿ ಸುಭಾಷ್ ಚಂದ್ರಬೋಸ್ ಅವರು ದೇಶಪ್ರೇಮಿಯಾಗಿದ್ದು, ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನೇ ಪಣವಾಗಿಟ್ಟು ಹೋರಾಡಿ ಪ್ರತಿಯೊಬ್ಬ ಯುವಶಕ್ತಿಗೂ ಮಹಾಚೇತನರಾಗಿದ್ದಾರೆ. ಸುಭಾಷ್ ಚಂದ್ರಬೋಸ್ ಅವರು ಭಾರತ ದೇಶದ ಯುವಕರಿಗೆ ಧೈರ್ಯ, ವೀರತ್ವ, ದೇಶಪ್ರೇಮ ಮತ್ತು ಸ್ವಾಭಿಮಾನ ಮೂಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಕೊಂಡ್ಲಹಳ್ಳಿ ಟಿ.ರೇವಣ್ಣ , ಮುಖ್ಯ ಶಿಕ್ಷಕ ಎಂ.ಗುರುಸ್ವಾಮಿ, ಶಿಕ್ಷಕರಾದ ರಾಜಶೇಖರ್ ಬಸವನಗೌಡ, ಎಸ್.ಕೆ.ವಿಜಯ್ ಕುಮಾರ್, ಸಣ್ಣಗಿಡ್ಡಯ್ಯ, ದೇವರಾಜ್, ಅನಿತಾ, ಮುಜುಬುಲ್ಲಾ, ವಿರೂಪಾಕ್ಷಪ್ಪ, ರೂಪಾ, ಶ್ರೀನಿವಾಸ , ಸೌಮ್ಯ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.