ಮುಂದುವರೆದ ಅಂಚೆ ನೌಕರರ ಧರಣಿ
Team Udayavani, May 26, 2018, 12:39 PM IST
ಚಳ್ಳಕೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಧರಣಿ ಶುಕ್ರವಾರ ನಾಲ್ಕು ದಿನ ಪೂರೈಸಿತು.
ಏಳನೇ ವೇತನ ಆಯೋಗದ ವರದಿ ಜಾರಿ, ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ
ಸಂಘದ ನೇತೃತ್ವದಲ್ಲಿ ತ್ಯಾಗರಾಜ ನಗರದ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಚೆ ಇಲಾಖೆಯ ಸುಮಾರು 40ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದಾರೆ.
ನವದೆಹಲಿಯಲ್ಲಿ ಸಂಘದ ಪ್ರತಿನಿಧಿಗಳೊಂದಿಗೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ವಿಫಲವಾಗಿದೆ. ಆದ್ದರಿಂದ ಬೇಡಿಕೆ ಈಡೇರುವವರೆಗೆ ಮುಷ್ಕರ ಮುಂದುವರೆಯಲಿದೆ ಎಂದು ನೌಕರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ.
ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೆಲವು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಗ್ರಾಮೀಣ ಅಂಚೆ ನೌಕರರ ಸಂಘದ ವಿಭಾಗಿಯ ಕಾರ್ಯದರ್ಶಿ ಮೈಲನಹಳ್ಳಿ ನಾಗರಾಜು ಮಾತನಾಡಿ, ನಮ್ಮ ಬೇಡಿಕೆ ಈಡೇರುವ ತನಕ ಮುಷ್ಕರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಮತ್ತೂಮ್ಮೆ ನೌಕರರ ಸಭೆ ನಡೆಸಿ “ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗುವುದು ಎಂದು ಗುಡುಗಿದರು. ಈ ಸಂದರ್ಭದಲ್ಲಿ ಚೇತನ್, ತಿಪ್ಪೇಸ್ವಾಮಿ, ಭುವನೇಶ್ವರಿ, ಸುಭಾನ್, ಸಣ್ಣಬೋರಯ್ಯ, ಕೆ.ಸಿ. ಮಹಂತೇಶ್, ಮಾರುತಿ, ಚಂದ್ರಶೇಖರ್, ಅನ್ನಪೂರ್ಣ, ರಾಜಮ್ಮ, ಕೆ.ಟಿ. ತಿಮ್ಮಾರೆಡ್ಡಿ ಮತ್ತಿತರರು ಇದ್ದರು.
ವೃದ್ಧರಿಗೂ ತಟ್ಟಿದ ಪ್ರತಿಭಟನೆ ಬಿಸಿ ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಆಗಮಿಸಿದ್ದ ವೃದ್ಧರಿಗೂ ಮುಷ್ಕರದ ಬಿಸಿ ತಟ್ಟಿತ್ತು. ಪ್ರತಿಭಟನಾನಿರತರು ಹಾಗೂ ವೃದ್ಧರ ಮಧ್ಯೆ ಕೆಲಕಾಲ ಮಾತಿಕ ಚಕಮಕಿಯು ನಡೆಯಿತು. ಈ ರೀತಿ ಮುಷ್ಕರ ನಡೆದರೆ ನಮ್ಮಂತಹ ಸಾವಿರಾರು ಮುಗ್ಧ ಜನರಿಗೆ ತೊಂದರೆಯಾಗುತ್ತಿದೆ. ಧರಣಿಯನ್ನು ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಲಾಲಾ ನಾಯ್ಕ, ದಾಸ್ಯ ನಾಯ್ಕ, ಪ್ರಶಾಂತ್‌ಕುಮಾರ್ ಎಂಬುವವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.