ವಿದ್ಯುನ್ಮಾನ ಮಾಧ್ಯಮದ ಜಾಹೀರಾತಿಗೆ ಅನುಮತಿ ಕಡ್ಡಾಯ

Team Udayavani, Feb 26, 2019, 8:37 AM IST

cta-2.jpg

ಚಿತ್ರದುರ್ಗ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮುದ್ರಣ ಮಾಧ್ಯಮವನ್ನು ಹೊರತುಪಡಿಸಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ನೀಡುವಾಗ ಸಮಿತಿಯಿಂದ ಪೂರ್ವಾನುಮತಿ ಪಡೆದಿರಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಹಾಗೂ ಕೇಬಲ್‌ ಆಪರೇಟರ್‌ಗಳು, ಚಿತ್ರಮಂದಿರ ಮಾಲೀಕರು, ಮುದ್ರಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟಿವಿಗಳಲ್ಲಿ, ಕೇಬಲ್‌ನಲ್ಲಿ ಹಾಗೂ ಚಿತ್ರಮಂದಿರಗಳಲ್ಲಿ ಜಾಹೀರಾತು ನೀಡುವಾಗ ಜಿಲ್ಲಾ ಮಟ್ಟದ ಮೀಡಿಯಾ ಸರ್ಟಿಫಿಕೇಷನ್‌ ಸಮಿತಿಯಿಂದ ಮುಂಚಿತವಾಗಿ ಅನುಮತಿ ಪಡೆದಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವಾಗ ಸಮಿತಿಯಿಂದ ಅನುಮೋದನೆ ಪಡೆದುಕೊಳ್ಳಬೇಕು. ಒಂದು ವೇಳೆ ಪ್ರಮಾಣಪತ್ರ ಪಡೆಯದೆ ಪ್ರಸಾರ ಮಾಡಿದಲ್ಲಿ ಅಂತಹ ಅಭ್ಯರ್ಥಿಗಳ ಮೇಲೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಲಿದೆ ಎಂದು ಎಚ್ಚರಿಸಿದರು.

ಚುನಾವಣಾ ಸಂದರ್ಭದಲ್ಲಿ ಮುದ್ರಿಸುವ ಕರಪತ್ರಗಳಲ್ಲಿ ಮುದ್ರಕರು ಕಡ್ಡಾಯವಾಗಿ ಮುದ್ರಣ ಸಂಖ್ಯೆಗಳನ್ನು ಪ್ರತಿ ಪುಟದ ಹಿಂಬದಿಯಲ್ಲಿ ಮುದ್ರಣ ಮಾಡಿರಬೇಕು. ಮುದ್ರಣ ಮಾಡಿದ ನಂತರ ನಿಯಮಾನುಸಾರ ಅನುಬಂಧದಂತೆ ವಿವರವನ್ನು ಚುನಾವಣಾಧಿಕಾರಿಗೆ ನೀಡುವುದು ಕಡ್ಡಾಯ ಎಂದರು. ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಸಕಲ ರೀತಿಯಿಂದಲೂ ಸಜ್ಜಾಗಿದೆ.

ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು ನೇಮಕ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ತರಬೇತಿ ನೀಡಲಾಗಿದೆ. ಅಗತ್ಯ ತಂಡಗಳು ಹಾಗೂ ವಿದ್ಯುನ್ಮಾನ ಮತಯಂತ್ರಗಳನ್ನು ಸಿದ್ಧಪಡಿಸಲಾಗಿದೆ. ಮತಯಂತ್ರಗಳ ಬಳಕೆ ಕುರಿತಂತೆ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ ಮಾತನಾಡಿ, ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿ 25 ವರ್ಷ ಆಗಿರಬೇಕು. ರಾಷ್ಟ್ರೀಯ ಮತ್ತು ಅಧಿಕೃತ ರಾಜ್ಯದ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಒಬ್ಬರು ಸೂಚಕರಿರಬೇಕು.

ಇತರೆ ರಾಜಕೀಯ ಪಕ್ಷಗಳು ಅಥವಾ ಪಕ್ಷೇತರ ಅಭ್ಯರ್ಥಿಗಳಿಗೆ ಕನಿಷ್ಠ 10 ಜನ ಸೂಚಕರು ಇರಬೇಕು. ಕ್ರಿಮಿನಲ್‌ ಹಿನ್ನೆಲೆ ಇದ್ದಲ್ಲಿ ಅದರ ವಿವರ ಸಲ್ಲಿಸಬೇಕು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಬೇಕು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಭೆ, ಸಮಾರಂಭ, ರ್ಯಾಲಿ ಕೈಗೊಳ್ಳಲು ಪೂರ್ವಾನುಮತಿ ಪಡೆಯಬೇಕು. 

ಭದ್ರತಾ ಠೇವಣಿಯನ್ನು ಸಾಮಾನ್ಯ ಅಭ್ಯರ್ಥಿಗಳಿಗೆ 25 ಸಾವಿರ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ 12,500 ರೂ. ನಿಗದಿಪಡಿಸಲಾಗಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರು, ಮುದ್ರಣಾಲಯಗಳ ಮಾಲೀಕರು, ಚಿತ್ರಮಂದಿರ ಮಾಲೀಕರು, ಕೇಬಲ್‌ ಆಪರೇಟರ್‌ಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.