ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಸಿದ್ಧತೆ

Team Udayavani, Nov 21, 2021, 3:08 PM IST

ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಸಿದ್ಧತೆ

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನಾದ್ಯಂತ ನ. 23 ರಿಂದ 27 ರವರೆಗೆ 1.23 ಲಕ್ಷ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಗುರಿ ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಬಿ.ವಿ. ಗಿರೀಶ್‌ ತಿಳಿಸಿದರು.

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆದ ಟಾಸ್ಕ್ಫೋರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು. 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ಅಲ್ಬೆಂಡಾಜೋಲ್‌ ನುಂಗಿಸುವ ರಾಷ್ಟ್ರೀಯ ಕಾರ್ಯಕ್ರಮ ಇದಾಗಿದೆ. ತಾಲೂಕಿನಲ್ಲಿ 530 ಅಂಗನವಾಡಿಗಳಿದ್ದು, 1 ರಿಂದ ಐದು ವರ್ಷದೊಳಗಿನ 30,847 ಮಕ್ಕಳಿದ್ದಾರೆ. 532 ಸರ್ಕಾರಿ/ಖಾಸಗಿ ಶಾಲೆಗಳಲ್ಲಿ ಒಂದರಿಂದ ಹತ್ತನೆ ತರಗತಿಗಳಲ್ಲಿ ಓದುತ್ತಿರುವ ಆರರಿಂದ ಹದಿನಾರು ವರ್ಷದೊಳಗಿನ 68,487 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಬೇಕಿದೆ ಎಂದರು.

ಪಿಯುಸಿ, ಡಿಪ್ಲೋಮಾ, ಐಟಿಐ, ನರ್ಸಿಂಗ್‌ ಇತರೆ 190 ಕಾಲೇಜುಗಳಲ್ಲಿ 23,802 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ತಹಶೀಲ್ದಾರ್‌ ಸತ್ಯನಾರಾಯಣ ಮಾತನಾಡಿ, ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡಿರಬೇಕು. ಪ್ರತಿಯೊಂದು ಮಗುವಿಗೂ ತಪ್ಪದೇ ಜಂತುಹುಳು ನಿವಾರಣಾ ಮಾತ್ರೆಯನ್ನು ನುಂಗಿಸಬೇಕು ಎಂದು ತಿಳಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಈಶ್ವರಪ್ಪ ಮಾತನಾಡಿ, ತಾಲೂಕಿನ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಸಮರ್ಪಕ ಮಾಹಿತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಆ ದಿನ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಮಕ್ಕಳ ವಯಸ್ಸಿಗೆ ಅನುಗುಣವಾಗಿ ಮಾತ್ರೆಗಳನ್ನು ನೀಡಬೇಕು. ಸಮಾಜ ಕಲ್ಯಾಣಾಧಿಕಾರಿ ಹಾಗೂ ಬಿಸಿಎಂ ಅಧಿ ಕಾರಿಗಳು ತಮ್ಮ ವ್ಯಾಪ್ತಿಯ ವಸತಿನಿಲಯಗಳಲ್ಲಿನ ಮಕ್ಕಳ ಸಂಖ್ಯೆಯನ್ನಾಧರಿಸಿ ತಾಲೂಕು ಆರೋಗ್ಯಾಧಿಕಾರಿಗಳಿಂದ ಮಾತ್ರೆಗಳನ್ನು ಪಡೆದು ಮಕ್ಕಳಿಗೆ ನುಂಗಿಸಿದ ನಂತರ ಸಂಪೂರ್ಣ ವರದಿ ನೀಡಬೇಕೆಂದು ಸೂಚಿಸಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್‌. ಎಸ್‌. ಮಂಜುನಾಥ್‌ ಮಾತನಾಡಿದರು. ಸಭೆಯಲ್ಲಿ ಬಿಸಿಎಂ ಅಧಿಕಾರಿ ಮುರಳಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ ಹತಿಕಾ ಬೇಗಂ, ಸಮಾಜಕಲ್ಯಾಣಾಧಿ ಕಾರಿ ಅನಿತಾ, ಡಾ| ಮಹೇಂದ್ರಕುಮಾರ್‌, ಡಾ| ವಾಣಿ, ಡಾ| ಸುಪ್ರಿತಾ, ಡಾ. ಮಂಜುಳಾ ಮೊದಲಾದವರು ಭಾಗವಹಿಸಿದ್ದರು.

ಕೋವಿಡ್‌ ನಿಯಂತ್ರಣಕ್ಕಾಗಿ ತಾಲೂಕಿನಲ್ಲಿ ಶೇ. 99.05ರಷ್ಟು ಲಸಿಕೆ ನೀಡಲಾಗಿದೆ. ಇಷ್ಟೊಂದು ಪ್ರಗತಿ ಸಾಧಿ ಸಲು ಎಲ್ಲಾ ಇಲಾಖೆಗಳ ಸಹಕಾರ ದೊರೆತಿದೆ. ಇದೇ ಮಾದರಿಯಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸಬೇಕು. –ಸತ್ಯನಾರಾಯಣ, ತಹಶೀಲ್ದಾರ್‌

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.