ಕೆಪಿಜೆಪಿಯಿಂದ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ
Team Udayavani, Feb 6, 2018, 6:41 PM IST
ಚಿತ್ರದುರ್ಗ: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ವತಿಯಿಂದ ಮುಂಬರುವ ವಿಧಾನ ಸಭಾ ಚುನಾವಣೆಗೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಗಜೇಂದ್ರ ಶರ್ಮಾ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ಪರ್ಧೆ ಮಾಡಬಯಸುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅರ್ಹ, ಉತ್ತಮ ಚಾರಿತ್ರ ಹಾಗೂ ಗೆಲ್ಲುವ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.
ಪಕ್ಷದ ಸಂಸ್ಥಾಪಕ ಅಧ್ಯಕ್ಷ ಡಿ. ಮಹೇಶ್ ಗೌಡ್ರು ಮತ್ತು ರಾಷ್ಟ್ರೀಯ ಅಧ್ಯಕ್ಷ ಉಪೇಂದ್ರ ಕುಮಾರ್ ಆದೇಶ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಸದೃಢವಾಗಲಿದೆ. ಸಮೃದ್ಧ ಕರ್ನಾಟಕ ನಿರ್ಮಾಣದೊಂದಿಗೆ ಲಂಚಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡಲು ಕಟಿಬದ್ಧವಾಗಿದ್ದೇವೆ. ರಾಷ್ಟ್ರೀಯ ಪಕ್ಷಗಳ ದುರಾಡಳಿತಕ್ಕೆ ಸೋತು ಹೋಗಿರುವ ಮತದಾರರು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಪಕ್ಷ ಎಲ್ಲ ವರ್ಗದವರ ಹಿತ ಕಾಯಲಿದೆ. ಅದರಲ್ಲೂ ರೈತರು, ವಿದ್ಯಾರ್ಥಿಗಳು, ಕಾರ್ಮಿಕರು, ನಿರುದ್ಯೋಗಿಗಳು, ಮಹಿಳೆಯರು, ಬಡವರ ಸಬಲೀಕರಣಕ್ಕಾಗಿ ಶ್ರಮಿಸಲಿದೆ ಎಂದು ಹೇಳಿದರು.
ಪಕ್ಷದ ಸಾರ್ವಜನಿಕ ಸಂಪರ್ಕಾಧಿಕಾರಿ ತಟ್ಟೇಕೆರೆ ಮಲ್ಲೇಶ್ ಮಾತನಾಡಿ, ಪ್ರಗತಿಪರ ರೈತರಿಂದ ಹಿಡಿದು ಪಾರದರ್ಶಕವಾಗಿರುವ ಎಲ್ಲರನ್ನೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಸ್ಪರ್ಧೆಗಿಳಿಸುವುದಾಗಿ ತಿಳಿಸಿದರು.
ಇಲ್ಲಿಯವರೆಗೂ ಆಡಳಿತ ನಡೆಸಿಕೊಂಡು ಬರುತ್ತಿರುವ ಎಲ್ಲಾ ಪಕ್ಷಗಳು ಒಂದಲ್ಲ ಒಂದು ರೀತಿಯಲ್ಲಿ ನಾಡಿನ ಸಂಪತ್ತನ್ನು ಲೂಟಿ ಮಾಡಿವೆ. ಚಿತ್ರದುರ್ಗದಲ್ಲಿ ಯಾವ ರಸ್ತೆಯೂ ಸರಿಯಾಗಿಲ್ಲ. ಇಲ್ಲಿನ ಜನಪ್ರತಿನಿ ಧಿಗಳು ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆಂಬುದು ಒಮ್ಮೆ ಇಲ್ಲಿ ಸುತ್ತಾಡಿದರೆ
ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು. ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ
ಮೊ: 9845114705/9986603226/988066 7527 ಸಂಪರ್ಕಿಸುವಂತೆ ಮನವಿ ಮಾಡಿದರು. ಕೆಪಿಜೆಪಿ ರಾಜ್ಯ ಉಪಾಧ್ಯಕ್ಷ ಆರ್. ಶಿವಕುಮಾರ್, ಮುಖಂಡ ಸಂಜಯ್ ಶರ್ಮಾ ಸುದ್ದಿಗೋಷ್ಠಿಯಲ್ಲಿದ್ದರು.
ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಹಲವಾರು ಜನ ನಮ್ಮ ಕಚೇರಿಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಅಂತಿಮವಾಗಿ ಸಂದರ್ಶನ ನಡೆಸಿ ಭ್ರಷ್ಟಾಚಾರದಿಂದ ದೂರ ಇರುವವರನ್ನು ಹುಡುಕಿ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲಾಗುವುದು.
ತಟ್ಟೇಕೆರೆ ಮಲ್ಲೇಶ್, ಕೆಪಿಜೆಪಿ ಸಾರ್ವಜನಿಕ ಸಂಪರ್ಕಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.