ಅಂಬಿಗರ ಚೌಡಯ್ಯರ ತತ್ವಾದರ್ಶ ಪಾಲಿಸಿ
ವಚನ ಸಾಹಿತ್ಯದ ಸಂದೇಶ ಪಾಲನೆಯಿಂದ ಸಾರ್ಥಕ ಬದುಕು: ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ
Team Udayavani, Jan 22, 2021, 6:24 PM IST
ಚಿತ್ರದುರ್ಗ: 12ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯಲ್ಲಿ ಅಂಬಿಗರ ಚೌಡಯ್ಯ ಪ್ರಮುಖರಾಗಿದ್ದರು. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಸಾಕಷ್ಟು ಶ್ರಮಿಸಿದರು ಎಂದು ಅಪರ ಜಿಲ್ಲಾಧಿ ಕಾರಿ ಬಾಲಕೃಷ್ಣ ಹೇಳಿದರು.
ಜಿಲ್ಲಾ ಧಿಕಾರಿ ಕಚೇರಿ ಸಭಾಗಂಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ನಿಜಶರಣ ಅಂಬಿಗರ ಚೌಡಯ್ಯನೀಡಿದ ತತ್ವಾದರ್ಶಗಳನ್ನು ಹಾಗೂ ವಚನ ಸಾಹಿತ್ಯದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಉಜ್ವಲವಾಗಲಿದೆ. ಅವರ ವಚನಗಳ ಸಂದೇಶ, ತತ್ವಾದರ್ಶಗಳನ್ನು ಇಡೀ ಸಮಾಜಕ್ಕೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಇದನ್ನೂ ಓದಿ : ಮಹಾನಗರ ಪಾಲಿಕೆಯಿಂದ ಕರ ಸಂಗ್ರಹ ಕ್ಯಾಂಪ್ ಆರಂಭ
ಉಪವಿಭಾಗಾ ಧಿಕಾರಿ ಡಾ| ನಾಗರಾಜ್ ಮಾತನಾಡಿ, ಅಂಬಿಗರ ಚೌಡಯ್ಯ ಅಂಬಿಗರ ವೃತ್ತಿಯ ತಮ್ಮ ಅನುಭವದ ಮೇಲೆ ವಚನಗಳನ್ನು ರಚಿಸಿದ್ದಾರೆ. ಬೇರೆ ವಚನಕಾರರು, ಶರಣರಂತೆ ಅಂಬಿಗ ಚೌಡಯ್ಯ ಇಷ್ಟ ದೈವವನ್ನು ಹೊಂದಿರದೆ ತಮ್ಮ ವೃತ್ತಿಯ ಅನುಭವದ ಮೂಲಕ ವಚನ ರಚಿಸಿ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ. ಹಾಗಾಗಿ ಬಸವಣ್ಣನವರು ಅಂಬಿಗರ ಚೌಡಯ್ಯ ಅವರನ್ನುನಿಜಶರಣ ಎಂದು ಕರೆದಿದ್ದಾರೆ ಎಂದು ಹೇಳಿದರು.
ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಎಚ್.ಡಿ. ರಂಗಯ್ಯ ಮಾತನಾಡಿ, ಅಂಬಿಗರ ಚೌಡಯ್ಯ ಜಯಂತಿಯನ್ನು ನಾಡಿನಾದ್ಯಂತ ಸರ್ಕಾರದಿಂದ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕೋವಿಡ್ ನಡುವೆಯೂ ಸರಳವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ನಿಜಶರಣರನ್ನು ಸ್ಮರಿಸುವ ಕೆಲಸ ಮಾಡಲಾಗಿದೆ. ಸಮಾಜ ಬಾಂಧವರು ಚೌಡಯ್ಯ ಅವರ ಮಾರ್ಗದಲ್ಲಿ ಸಾಗಬೇಕು ಎಂದು ತಿಳಿಸಿದರು.
ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಎಸ್. ಕೃಷ್ಣಮೂರ್ತಿ ಮಾತನಾಡಿ, ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸಲು ಯತ್ನಿಸಿದ್ದರು. ಅವರ ವಚನಗಳ ಮೂಲಕ ಸಮಾಜದ ಓರೆ-ಕೋರೆಯನ್ನು ತಿದ್ದಲು ಸಾಧ್ಯವಿದೆ. ನಿಷ್ಠುರ, ನೇರ ನುಡಿಯ ನಿಜಶರಣ ಅಂಬಿಗರ ಚೌಡಯ್ಯ ಜೀವನದಲ್ಲಿ ಮುಕ್ತಿ ಕಾಣುವ ಮಾರ್ಗವನ್ನು ತೋರಿಸಿಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ಅವಿನ್, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ರಂಗನಿರ್ದೇಶಕ ಕೆ.ಪಿ.ಎಂ ಗಣೇಶಯ್ಯ ಸೇರಿದಂತೆ ಗಂಗಾಮತ ಸಮಾಜದ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ : ರೈತರ ಅನುಕೂಲಕ್ಕಾಗಿ ಕ್ವಿಂಟಲ್ ತೊಗರಿಗೆ 6 ಸಾವಿರ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.