ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ
Team Udayavani, Jun 13, 2020, 8:10 AM IST
ಚಳ್ಳಕೆರೆ: ಯಾವುದೇ ಖಾಸಗಿ ಕೈಗಾರಿಕೆ ಹಾಗೂ ಇನ್ನಿತರ ಕಡೆಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿ ಕೊಂಡಿದ್ದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಶಿರಸ್ತೇದಾರ್ ಚಂದ್ರಶೇಖರ್ ಎಚ್ಚರಿಸಿದರು.
ಶುಕ್ರವಾರ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ಕಾರ್ಮಿಕ ಇಲಾಖೆ ಬಾಲಕಾರ್ಮಿಕರ ಸಮಸ್ಯೆಗಳ ನಿವಾರಣೆಗೆ ಹೆಚ್ಚು ಜಾಗ್ರತೆ ವಹಿಸುತ್ತಿದೆ ಎಂದರು.
ಕಾರ್ಮಿಕ ಅಧಿಕಾರಿ ಟಿ. ಕುಸುಮಾ ಮಾತನಾಡಿ, ರಾಜ್ಯದೆಲ್ಲೆಡೆ ಬಾಲಕಾರ್ಮಿಕರ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಂಡು ದುಡಿಸಿಕೊಂಡಲ್ಲಿ ಅದು ಅಪರಾಧ ವಾಗುತ್ತದೆ. ಮಕ್ಕಳ ಸ್ವಾತಂತ್ರ್ಯ ವನ್ನು ಮೊಟಕುಗೊಳಿಸಬಾರದು. ಅನಿಷ್ಠ ಪದ್ಧತಿಯನ್ನು ಹೊಡೆದೋಡಿಸಲು ಎಲ್ಲರೂ ಕಾರ್ಮಿಕ ಇಲಾಖೆ ಯೊಂದಿಗೆ ಕೈಜೋಡಿಸಬೇಕೆಂದರು.
ಆಹಾರ ಶಿರಸ್ತೇದಾರ್ ಶಿವಾಜಿ ರಾವ್, ಬಿಆರ್‌ಪಿ ಮಲ್ಲಿಕಾರ್ಜುನ್, ಸಿಡಿಪಿಒ ಕಚೇರಿಯ ನವೀನ್ ಕುಮಾರ್, ಶೇಖರಪ್ಪ, ರಾಜಣ್ಣ, ಚಿರಂಜೀವಿ, ಅಮೀರ್ ಖಾನ್ ರೇಖಾ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.