ತಾಂತ್ರಿಕ ಸಮಸ್ಯೆ ಕಾರಣಕ್ಕೆ ವಿಶಲ್ ಆ್ಯಪ್ ಹಿಂಪಡೆದಿದ್ದೇವೆ: ವಿ. ಸೋಮಣ್ಣ
Team Udayavani, Jan 31, 2021, 6:39 PM IST
ಚಿತ್ರದುರ್ಗ: ವಸತಿ ಯೋಜನೆಗಳು ಯಾವ ಹಂತದಲ್ಲಿವೆ ಎನ್ನುವುದನ್ನು ಗಮನಿಸುವ ಉದ್ದೇಶದಿಂದ ಬಳಕೆಯಾಗುತ್ತಿದ್ದ ವಿಶಲ್ ಆ್ಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಚಿತ್ರದುರ್ಗದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವರ್ ಮತ್ತಿತರೆ ಸಮಸ್ಯೆಗಳಿಗೆ ಅಧಿಕಾರಿಗಳು ಹೆದರಿದ್ದರು. ಸಾಕಷ್ಟು ದೂರು ಬರುತ್ತಿದ್ದವು. ಹಣ ಕೂಡಾ ಬಿಡುಗಡೆಯಾಗುತ್ತಿರಲಿಲ್ಲ. ಈವರೆಗೆ ಶೇ. 62 ರಷ್ಟು ಮಾತ್ರ ಅನುದಾನ ಖರ್ಚಾಗಿತ್ತು. ಇನ್ನೂ ಶೇ. 38 ಖರ್ಚಾಗಬೇಕಿದೆ. ಈ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಮೂರು ತಿಂಗಳ ಕಾಲ ವಿಶಲ್ ಆ್ಯಪ್ ಹಿಂಪಡೆದಿದ್ದೇವೆ. ಈಗ ಜಿಪಿಎಸ್ ಮೂಲಕವೇ ಮನೆಗಳಿಗೆ ಹಣ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಅಲೆಮಾರಿ, ಸುಡುಗಾಡು ಸಿದ್ದರಿಗೆ ನಿವೇಶನ, ಮನೆ ನೀಡುವ ಬಗ್ಗೆ ಈಗಾಗಲೇ ಸರ್ಕಾರಿ ಆದೇಶ ಬಂದಿದೆ. ಶಾಸಕರು, ಅಧಿಕಾರಿಗಳು ಹಕ್ಕುಪತ್ರ ವಿತರಿಸಲಿದ್ದಾರೆ. ಮಾರ್ಚ್30 ರೊಳಗೆ ಬಜೆಟ್‌ನಲ್ಲಿರುವುದನ್ನು ಖರ್ಚು ಮಾಡಲು ಶಾಸಕರು, ಸಿಇಒ ಸೇರಿದಂತೆ ಅಧಿಕಾರಿಗಳಿಗೆ ಪತ್ರ ಬರೆಯುತ್ತೇನೆ ಎಂದರು.
ಇದನ್ನೂ ಓದಿ: ಸೋದರಳಿಯನ ಪ್ರಗತಿಗೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ ಇನ್ಮುಂದೆ ಏಕಾಂಗಿ: ಶಾ ಆಕ್ರೋಶ
ಉದ್ಧವ್ ಠಾಕ್ರೆ ಉದ್ಧಟತನದ ಪರಮಾವಧಿ:
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನಪ್ರಿಯತೆ ಕುಂದಿದೆ. ಅದಕ್ಕಾಗಿ ಏನೇನೋ ಮಾತಾಡಿ ಜನಪ್ರಿಯತೆ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸೋಮಣ್ಣ ವ್ಯಂಗ್ಯವಾಡಿದರು.
ಈಗಾಗಲೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆಗೆ ನಾನು ಪುಷ್ಠಿ ಕೊಡುತ್ತೇನೆ. ಠಾಕ್ರೆಯ ಉದ್ಧಟತನದ ಪರಮಾವಧಿಗೆ ಸಿಎಂ ಬಿಎಸ್‌ವೈ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾಜನ್ ವರದಿಯೇ ಅಂತಿಮ ತೀರ್ಮಾನ. ನಮ್ಮ ರಾಜ್ಯದಲ್ಲಿರುವುದನ್ನು ಅಭಿವೃದ್ಧಿ ಮಾಡಲು ಯಾರನ್ನೋ ಕೇಳುವ ಅಗತ್ಯವಿಲ್ಲ.
ಒಬ್ಬ ಮುಖ್ಯಮಂತ್ರಿಯಾಗಿ ಆ ಹುದ್ದೆಯ ಗಾಂಭಿರ್ಯತೆ ಅರ್ಥ ಮಾಡಿಕೊಳ್ಳದೆ ಈ ರೀತಿಯಾಗಿ ಜನರನ್ನು ಎತ್ತಿಕಟ್ಟುವುದು ಮೂರ್ಖತನ ಎಂದು ಹೇಳಿದರು.
ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮರಕ್ಕೆ ಅಪ್ಪಳಿಸಿದ ಕಾರು;ಸ್ಥಳದಲ್ಲಿಯೇ ಇಬ್ಬರ ದುರ್ಮರಣ,
ಯುಗಾದಿಯೊಳಗೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ನಾವು ಮಾತನಾಡುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಖುದ್ದು ಅಮಿತ್ ಶಾ ಅವರೇ ಬಿ.ಎಸ್. ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿ ಎಂದು ಹೇಳಿದ್ದಾರೆ ಎಂದರು.
ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕುರಿತ ಪ್ರಶ್ನೆಗೆ ಅದು ಮುಗಿದು ಹೋದ ವಿಚಾರ ಎಂದು ಪ್ರತಿಕ್ರಿಯಿಸಿದರು. ಈ ವೇಳೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಇದ್ದರು
ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದಿದ್ದ ಆರೋಗ್ಯ ಕಾರ್ಯಕರ್ತೆ ಸಾವು; ತೆಲಂಗಾಣದಲ್ಲಿ 3ನೇ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.