ಅಪರಾಧ ತಡೆಗೆ ಸಹಕಾರ ಕೊಡಿ: ಎಸ್ಪಿ
Team Udayavani, Dec 20, 2018, 5:24 PM IST
ಚಿತ್ರದುರ್ಗ: ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕರು
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಪ್ರಾಪ್ತರು ಬೈಕ್ ಓಡಿಸುವುದು ಸೇರಿದಂತೆ ಯಾವುದೇ ರೀತಿಯ
ಅಪರಾಧ ಮಾಡಿದರೂ ಅವರಿಗೆ ಎಲ್ಲ ರೀತಿಯ ಕಾನೂನು ಅನ್ವಯಿಸುತ್ತದೆ. ಅಪಘಾತವಾಗುವುದು ಆಕಸ್ಮಿಕವಾದರೂ ಅದು ಕೂಡಾ ಅಪರಾಧದ ಒಂದು ಭಾಗವೇ ಆಗಿದೆ. ಆದ್ದರಿಂದ ಅಪರಾಧ ತಡೆಯುವ ಪ್ರಯತ್ನ ಮಾಡಬೇಕು ಎಂದರು.
ಯಾವುದೇ ವಾಹನ ಚಲಾಯಿಸಲು ವಾಹನ ಚಾಲನಾ ಪರವಾನಗಿ ಮುಖ್ಯ. ಪ್ರತಿಯೊಬ್ಬರೂ ಚಾಲನಾ ಪರವಾನಗಿ ಪಡೆದು ವಾಹನ ಚಲಾಯಿಸಬೇಕು. ಪ್ರತಿಯೊಬ್ಬ ವಾಹನ ಸವಾರ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ
ಪಾಲಿಸಬೇಕು. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸಂಚರಿಸುವಾಗ ರಸ್ತೆ ಬದಿಯ ಸೂಚನಾ ಫಲಕಗಳನ್ನು
ಗಮನಿಸಿ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಪಘಾತವಾಗುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಸಿದರು. ವಾಹನವನ್ನು ಮನಬಂದಂತೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡುವಾಗ, ಅತಿಯಾದ ವೇಗದಿಂದ ಚಲಾಯಿಸುವ ಸಂದರ್ಭಗಳಲ್ಲಿ ನಿಮ್ಮ ಕುಟುಂಬ ಸದಸ್ಯರನ್ನು ಒಮ್ಮೆ ನೆನಪಿಸಿಕೊಳ್ಳಿ. ನಿಮಗೇನಾದರೂ ಆದರೆ ನಿಮ್ಮ ಕುಟುಂಬ ಬೀದಿಗೆ ಬೀಳುತ್ತದೆ ಎಂಬುದನ್ನು ಮರೆಯದಿರಿ ಎಂದು ವಾಹನ ಸವಾರರಿಗೆ ಕಿವಿಮಾತು ಹೇಳಿದರು. ಕಳ್ಳತನ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ಸಹಕರಿಸಿ ಎಂದು
ಅವರು ಮನವಿ ಮಾಡಿದರು.
ಡಿವೈಎಸ್ಪಿ ಸಂತೋಷ್‌ಕುಮಾರ್, ಸಿಪಿಐಗಳು, ಪಿಎಸ್‌ಐಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು
ಸೇರಿದಂತೆ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.