ಆಡುಮಲ್ಲೇಶ್ವರ ಪ್ರವಾಸಿ ತಾಣವಾಗಿಸಲು ಯತ್ನ
Team Udayavani, Jul 8, 2018, 5:27 PM IST
ಚಿತ್ರದುರ್ಗ: ಬರಪೀಡಿತ ಚಿತ್ರದುರ್ಗ ಜಿಲ್ಲೆಗೆ ಜೋಗಿಮಟ್ಟಿ ಅರಣ್ಯ ಪ್ರದೇಶ ವರದಾನವಾಗಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ಹೊರವಲಯದ ಆಡುಮಲ್ಲೇಶ್ವರ ಕಿರು ಮೃಗಾಲಯ ಮತ್ತು ಬಾಲವನದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರ ಮೈಸೂರು ಹಾಗೂ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ಕಿರು ಮೃಗಾಲಯದ ವಲಯ ಅರಣ್ಯಾಧಿ ಕಾರಿಗಳ ನವೀಕೃತ ಕಚೇರಿ ಉದ್ಘಾಟನೆ, ಚಿರತೆ ಆವರಣಕ್ಕೆ ಶಿಲಾನ್ಯಾಸ ಮತ್ತು ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಡುಮಲ್ಲೇಶ್ವರ ಕಿರು ಮೃಗಾಲಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ಅನುದಾನ ನೀಡಲಾಗುವುದು. ಆಗ ಮತ್ತಷ್ಟು ಕಾಡುಪ್ರಾಣಿಗಳು ಇಲ್ಲಿಗೆ ಬಂದು ಸೇರಲಿವೆ. ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲಿವೆ. ಆಡುಮಲ್ಲೇಶ್ವರ ಕಿರು ಮೃಗಾಲಯ ಅಭಿವೃದ್ಧಿಯಾದರೆ, ಸಮೀಪದಲ್ಲೇ ಇರುವ ತಿಮ್ಮಣ್ಣನಾಯಕನ ಕೆರೆಯ ಅಭಿವೃದ್ಧಿಯೂ ಆಗಬೇಕು. ಆಗ ಕೋಟೆ ಜತೆಗೆ ಈ ಎರಡು ಸ್ಥಳಗಳು ನೋಡಲು ಹೆಚ್ಚು ಆಕರ್ಷಿತವಾಗಿರುತ್ತವೆ ಎಂದು ಅಭಿಪ್ರಾಯಪಟ್ಟರು.
ಜೋಗಿಮಟ್ಟಿ ಹಾಗೂ ಆಡುಮಲ್ಲೇಶ್ವರಕ್ಕೆ ನಗರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಶನಿವಾರ ಮತ್ತು ಭಾನುವಾರ ಬಸ್ ಸಂಚಾರ ಇದ್ದು, ಮುಂದಿನ ದಿನಗಳಲ್ಲಿ ಎಲ್ಲ ಸರ್ಕಾರಿ ರಜೆ ದಿನಗಳು ಸೇರಿದಂತೆ ಇತರೆ ದಿನಗಳಲ್ಲೂ ಓಡಾಟ ಮಾಡಬೇಕು ಎಂದರು.
ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ಮಲೆನಾಡಗಿಂತ ಸುಂದರ ಮತ್ತು ಆಕರ್ಷಣಿಯ ತಾಣವಾಗಿ ಆಡುಮಲ್ಲೇಶ್ವರ ಮತ್ತು ಜೋಗಿಮಟ್ಟಿ ಪ್ರದೇಶಗಳಿವೆ. ಇಂತಹ ಪ್ರದೇಶಗಳ ಸಂರಕ್ಷಣೆಗೆ ಅಧಿಕಾರಿಗಳು ಬದ್ಧವಾಗಿರಬೇಕು. ಚಿರತೆ, ಕರಡಿ ಸೇರಿದಂತೆ ಮತ್ತಿತರ ಕಾಡುಪ್ರಾಣಿಗಳು ಆಹಾರ ಹುಡುಕಿ ಜನವಸತಿ ಪ್ರದೇಶಗಳಿಗೆ ಬರುತ್ತಿದ್ದು ಜನರ ಮೇಲೆ ದಾಳಿ ಮಾಡುತ್ತಿವೆ. ಇದನ್ನು ತಡೆಯುವ ಕೆಲಸ ಮಾಡಬೇಕು. ಕಾಡಿನೊಳಗಿರುವ ಕಾಡುಪ್ರಾಣಿಗಳಿಗೆ ಕುಡಿಯಲು ನೀರು, ಆಹಾರದ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಆಡುಮಲ್ಲೇಶ್ವರ, ಜೋಗಿಮಟ್ಟಿ ಪ್ರದೇಶಗಳು ಅಧ್ವಾನದಿಂದ ಕೂಡಿವೆ. ರಸ್ತೆ ಇಲ್ಲ, ಶೌಚಾಲಯವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇತ್ತೀಚೆಗೆ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದು, ಜೋಗಿಮಟ್ಟಿ, ಆಡುಮಲ್ಲೇಶ್ವರ ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳಿಗೆ ಅನುದಾನ ನೀಡುವಂತೆ ಕೋರಿದ್ದೇನೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚುವರಿ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಉಪ ಅರಣ್ಯ ಸಂರಕ್ಷಣಾಕಾರಿ ಕೆ.ಬಿ. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ 9 ಮೃಗಾಲಯಗಳಿವೆ. ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯ 9ನೇಯದಾಗಿದೆ.
1987ರಲ್ಲಿ ಇದನ್ನು ಆರಂಭಿಸಲಾಗಿತ್ತು. ಮುಂದಿನ ದಿನಗಳಲ್ಲಿ ಎರಡು ಹುಲಿ, ಚಿರತೆ, 25 ಹೊಸ ಪಕ್ಷಿಗಳ ಆಗಮನವಾಗಲಿದೆ. ಪ್ರತಿ ವರ್ಷ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಒಂದು ಲಕ್ಷ ಪ್ರವಾಸಿಗರು ಬಂದು ಹೋಗುತ್ತಿದ್ದು ಕನಿಷ್ಠ 3 ಲಕ್ಷದಷ್ಟಾದರೂ ಪ್ರವಾಸಿಗರು ಬಂದು ಹೋಗುವಂತೆ ಮಾಡಲಾಗುತ್ತದೆ. ಅದಕ್ಕೆ ಬೇಕಿರುವ ಎಲ್ಲ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಮೃಗಾಲಯವನ್ನು ಬನ್ನೇರುಘಟ್ಟ ಮೃಗಾಲಯ ದತ್ತು ಪಡೆದಿದೆ ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಕೆ.ಜಿ. ಮೂಡಲಗಿರಿಯಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.