ಬಾಲ್ಯವಿವಾಹ ನಿಯಂತ್ರಣಕ್ಕೆ ಕೈ ಜೋಡಿಸಿ


Team Udayavani, Nov 15, 2021, 3:08 PM IST

ಬಾಲ್ಯವಿವಾಹ ನಿಯಂತ್ರಣಕ್ಕೆ ಕೈ ಜೋಡಿಸಿ

ಚಿತ್ರದುರ್ಗ: ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿವೆ. ಇದನ್ನು ಸಂಪೂರ್ಣ ನಿಯಂತ್ರಣ ಮಾಡುವ ಉದ್ದೇಶಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಮನಗೂಳಿ ಎಂ. ಪ್ರೇಮಾವತಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಸ್ವಾತಂತ್ರÂದ ಅಮೃತ ಮಹೋತ್ಸವ, ಕಾನೂನು ಸೇವಾ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹದಿಂದ ಆಗುವ ಸಮಸ್ಯೆ ಬಗ್ಗೆ ಜನರಿಗೆ ತಿಳಿಸಿದ್ದರೂ, ಮತ್ತೆ ಅದೇ ತಪ್ಪು ಮಾಡುವುದು ಎಷ್ಟು ಸರಿ ಎಂದು ನ್ಯಾಯಾಧೀಶರು ಬೇಸರ ವ್ಯಕ್ತಪಡಿಸಿದರು. ಬಾಲ್ಯವಿವಾಹಕ್ಕೆ ಹೆಣ್ಣು ಮಕ್ಕಳೇ ಹೆಚ್ಚಾಗಿ ಗುರಿಯಾಗುತ್ತಿದ್ದಾರೆ. ಜಗತ್ತಿಗೆ ಆಗ ತಾನೇ ಕಣ್ಣು ಬೀಡುವ ಏನು ಹರಿಯದ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರೇ ಅವರ ಜೀವನ ಹಾಳು ಮಾಡಿದಂತೆ. ನಗರ ಪ್ರದೇಶಕ್ಕಿಂತಲೂ ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಆಗಾಗ ನಡೆಯುತ್ತಿವೆ. ಇದನ್ನು ಸಂಪೂರ್ಣವಾಗಿ ತಡೆಯುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಜತೆ ಎಲ್ಲರ ಸಹಕಾರ ಮುಖ್ಯ ಎಂದರು.

ಭವ್ಯ ಭಾರತ ನಿರ್ಮಾಣದಲ್ಲಿ ದೇಶದ ಆಸ್ತಿಯಾಗಿರುವ ಮಕ್ಕಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಮಕ್ಕಳ ಹಕ್ಕುಗಳ ರಕ್ಷಣೆ ಆಗಬೇಕು. ಅವರ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದರು ತಿಳಿಸಿದರು. ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಪಾಲಕರು ತಪ್ಪು ಮಾಡಿದರೆ ನೀವುಗಳೇ ಕಾನೂನಿನ ಬಗ್ಗೆ ತಿಳಿಸಬೇಕು. ಆಗ ಸಮಸ್ಯೆ ಆಗುವುದು ಪ್ರಥಮ ಹಂತದಲ್ಲೇ ತಪ್ಪಿಸಿದಂತಾಗುತ್ತದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಹಕ್ಕುಗಳ ಕುರಿತು ಮಕ್ಕಳು ತಿಳಿದು ಕೊಳ್ಳಬೇಕು. ವಿದ್ಯೆಯ ಜತೆಗೆ ಸಂಸ್ಕಾರವಂತರಾಗಿ ಬಾಳುವುದನ್ನು ಕಲಿಯಬೇಕು. ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಹ ಸತøಜೆಗಳಾಗಿ ದೇಶ ಕಟ್ಟುವ ಕಾಯಕಕ್ಕೆ ಕೈಜೋಡಿಸಬೇಕು. ಮಕ್ಕಳ ಸಹಾಯವಾಣಿ 1098, ಪೊಲೀಸ್‌ ಸಹಾಯವಾಣಿ 112 ಪ್ರತಿಯೊಬ್ಬ ಮಕ್ಕಳ ಬಳಿಯೂ ಇರಬೇಕು. ಎಲ್ಲಿಯಾದರೂ ದೌರ್ಜನ್ಯ ನಡೆದರೆ, ತೊಂದರೆ ಉಂಟಾದಲ್ಲಿ ಇದು ಸಹಾಯಕ್ಕೆ ಬರಲಿದೆ. ಆದ್ದರಿಂದ ತಪ್ಪದೇ ನಿಮ್ಮ ಬಳಿ ನಂಬರ್‌ ಇಟ್ಟುಕೊಳ್ಳಿ ಎಂದು ಸಲಹೆ ನೀಡಿದರು.

ಕಾನೂನಾತ್ಮಕವಾಗಿ 18 ವರ್ಷ ತುಂಬಿದ ಬಳಿಕ ಅಧಿ ಕೃತವಾಗಿ ಚಾಲನಾ ಪರವಾನಗಿ ಪಡೆದು ವಾಹನ ಚಾಲನೆ ಮಾಡಬೇಕು. ಆದರೆ, ಅದಕ್ಕಿಂತ ಮುನ್ನ ಯಾವ ಮಕ್ಕಳು ವಾಹನ ಚಾಲನೆ ಮಾಡಬಾರದು ಎಂದು ತಿಳಿಸಿದರು. ಬಾಲಕಿಯರ ಬಾಲಮಂದಿರ ಮಕ್ಕಳಿಂದ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕಿರುನಾಟಕ, ಬಾಲಕರ ಬಾಲಮಂದಿರದ ಮಕ್ಕಳಿಂದ ನೃತ್ಯ ಹಾಗೂ ಚಿತ್ರ, ಡಾನ್‌ ಬಾಸ್ಕೊ ಮಕ್ಕಳು ಕಿರು ನಾಟಕ ಪ್ರದರ್ಶಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ನ್ಯಾಯಾಲಯದ ಆವರಣದಿಂದ ತರಾಸು ರಂಗಮಂದಿರದವರೆಗೂ ಜಾಥಾ ನಡೆಯಿತು. ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಘೋಷಣೆಗಳ ರಚನೆ ಹಾಗೂ ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ನ್ಯಾಯಾಧೀಶರಾದ ಆರ್‌.ಬನ್ನಿಹಟ್ಟಿ ಹನುಮಂತಪ್ಪ, ಎಚ್‌.ಎಂ.ದೇವರಾಜು, ಎಸ್‌. ಎನ್‌. ಕಲ್ಕಣಿ, ಸಿ.ಎಸ್‌. ಜಿತೇಂದ್ರನಾಥ್‌, ಕೆ.ಲತಾ, ನೇಮಚಂದ್ರ ಜೆ. ದೇಸಾಯಿ, ಎಚ್‌. ಜೆ. ಶಿಲ್ಪಾ, ಬಿ.ಕೆ. ಗಿರೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್‌. ರಾಜಾನಾಯಕ್‌, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವು ಯಾದವ್‌, ಜಿ.ಸಿ. ದಯಾನಂದ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶ್ವರಪ್ಪ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್‌. ಪ್ರಭಾಕರ್‌ ಇದ್ದರು.

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.