ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ವಾಲ್ಮೀಕಿ ಶ್ರೀಗಳನ್ನು ಸೇರಿಸಲು ಜಿ.ಪಂ ಅನುಮೋದನೆ
Team Udayavani, Feb 29, 2020, 6:16 PM IST
ಚಿತ್ರದುರ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್ ಗೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಸೇರಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಂಡಿಸಿದ ನಡಾವಳಿಗೆ ಅನುಮೋದನೆ ನೀಡಲಾಯಿತು.
ಜಿ.ಪಂ ಸದಸ್ಯ ಕೃಷ್ಣಮೂರ್ತಿ ಮಂಡಿಸಿದ ನಡಾವಳಿಯಲ್ಲಿ, ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್ನಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರನ್ನು ಸೇರಿಸಲಾಗಿದೆ. ಆದರೆ, ಶ್ರೀರಾಮನನ್ನು ಪರಿಚಯಿಸಿದ್ದ ಶ್ರೀ ವಾಲ್ಮೀಕಿ. ಹೀಗಾಗಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಶ್ರೀಗಳನ್ನು ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಸೇರಿಸಬೇಕು ಎಂದು ಜಿಲ್ಲಾ ಪಂಚಾಯತಿ ಮೂಲಕ ಒತ್ತಾಯಿಸಲಾಯಿತು. ಇದಕ್ಕೆ ಸಭೆಯಲ್ಲಿದ್ದ ಸದಸ್ಯರೆಲ್ಲರೂ ಒಪ್ಪಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.