ಡಿ ಕೆ ಶಿವಕುಮಾರ್ ಗೆ ಒಳ್ಳೆಯದಾಗಲಿ: ಬಿ.ವೈ. ರಾಘವೇಂದ್ರ
Team Udayavani, Sep 5, 2019, 12:37 PM IST
ಚಿತ್ರದುರ್ಗ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡಿಲ್ಲ, ಕಾನೂನು ಹೋರಾಟದಲ್ಲಿ ಅವರಿಗೆ ಒಳ್ಳೆಯದಾಗಲಿ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಚಿತ್ರದುರ್ಗ ಮುರುಘಾ ಮಠದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಯಾವುದೇ ವ್ಯಕ್ತಿಗೆ ನೋವಾದಾಗ ಹೀಗೆ ಆರೋಪ ಮಾಡುವುದು ಸಾಮಾನ್ಯ. ಆದರೆ, ಅವರಿಗೆ ಕಾನೂನು ಹೋರಾಟದಲ್ಲಿ ಒಳ್ಳೆಯದಾಗಲಿ ಎಂದು ಹಾರೈಸಿದರು.
ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ನಾವು ದ್ವೇಷ ರಾಜಕೀಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.
ಸಿಬಿಐ, ಇಡಿ, ಐಟಿ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿವೆ. ಈ ವಿಚಾರದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು.
ಇಂದಿರಾಗಾಂಧಿ ಕಾಲದಲ್ಲಿ ಬಹುದೊಡ್ಡ ಪಕ್ಷವಾಗಿ ಮೂರನೇ ಎರಡರಷ್ಟು ಬಹುಮತ ಹೊಂದಿದ್ದ ಕಾಂಗ್ರೆಸ್ ಈಗ ಹೀನಾಯ ಸ್ಥಿತಿ ತಲುಪಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶಾದ್ಯಂತ ವಿರೋಧ ಪಕ್ಷದ ಸ್ಥಾನಮಾನ ಕೂಡಾ ಸಿಗುತ್ತಿಲ್ಲ. ಹೀಗಾಗಿ ಯಾವುದೇ ಚುನಾವಣೆ ಗೆಲ್ಲಲು ಡಿಕೆಶಿ ಅವರನ್ನು ಅರೆಸ್ಟ್ ಮಾಡಿಸುವ ಕೆಲಸ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.
ಹೊಸದುರ್ಗ ಪಿಎಸ್ಐ ವರ್ಗಾವಣೆ ವಿಚಾರದಲ್ಲಿ ರಾಘವೇಂದ್ರ ಅವರು ಹಸ್ತಕ್ಷೇಪಮಾಡುತ್ತಿದ್ದಾರೆ ಎಂಬ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿ, ತಪ್ಪು ತಿಳುವಳಿಕೆಯಿಂದ ಮಾತನಾಡಿದ್ದಾರೆ. ನಾವು ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಈ ಬಗ್ಗೆ ಶಾಸಕರ ಜತೆ ಮಾತಾನಾಡಿದ್ದೇನೆ. ಈಗ ಎಲ್ಲವೂ ಸರಿಯಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.