ವ್ಯಕ್ತಿತ್ವ ವಿಕಸನದಿಂದ ಸುಂದರ ಸಮಾಜ

Team Udayavani, Nov 30, 2021, 4:53 PM IST

ವ್ಯಕ್ತಿತ್ವ ವಿಕಸನದಿಂದ ಸುಂದರ ಸಮಾಜ

ಹೊಸದುರ್ಗ: ರಾಜ್ಯ, ರಾಷ್ಟ್ರ ಸಮಾಜದ ಅಭಿವೃದ್ಧಿಯ ಜೊತೆಗೆ ವೈಯಕ್ತಿಕ ಬದುಕನ್ನು ಸುಂದರಗೊಳಿಸುವ ಸಲುವಾಗಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಭಗೀರಥ ಪೀಠದ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು.

ತಾಲೂಕಿನ ಬ್ರಹ್ಮವಿದ್ಯಾನಗರದಲ್ಲಿರುವ ಭಗೀರಥ ಮಠದಲ್ಲಿ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಬೆಳವಣಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ವ್ಯಕ್ತಿಗಳಲ್ಲಿ ಜ್ಞಾನ ಸಾಮರ್ಥ್ಯ, ಕೌಶಲ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಂದ ನಾನಾ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಇದು ಸುಂದರ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಮುಂದಿನ ಪೀಳಿಗೆಗೆ ನಾವೆಲ್ಲರೂ ಆದರ್ಶವಾಗಿರಬೇಕೆಂದರೆ ನಮ್ಮೆಲ್ಲರ ಜೀವನ ಶುದ್ಧವಾಗಿರಬೇಕು ಎಂದರು.

ಮಹಿಳೆಯರು ಮತ್ತು ಕಾನೂನು ವಿಷಯದ ಕುರಿತು ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ನಮ್ಮದೇಶದಲ್ಲಿ ಹೆಣ್ಣಿಗೆ ಪೂಜನೀಯ ಸ್ಥಾನವಿದೆ. ಹೆಣ್ಣಿನಲ್ಲಿರುವ ಶಕ್ತಿಯಿಂದ ಇಂದು ಮಹಿಳೆ ಎಲ್ಲ ರಂಗಗಳಲ್ಲಿಯೂ ತನ್ನದೇ ಆದ ಕಾರ್ಯವೈಖರಿಯಿಂದ ಗುರುತಿಸಲ್ಪಟ್ಟಿದ್ದಾಳೆ. ಮಹಿಳೆಯರಿಗೆ ಪುರುಷರಷ್ಟೇ ಸಮಾನ ಶಿಕ್ಷಣವನ್ನು ಪಡೆಯುವ ಅಧಿಕಾರವಿದೆ. ಇದು ಸರಕಾರದ ಜವಾಬ್ದಾರಿಯೂ ಆಗಿದೆ. ದೇಶದ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗಾಗಿಯೇ ಅನೇಕ ಕಾನೂನುಗಳಿವೆ. ಸ್ವಾಮಿ ವಿವೇಕಾನಂದರು ಹೇಳುವಂತೆ ನಮ್ಮ ಜೀವನದ ಶಿಲ್ಪಿಗಳು ನಾವೇ ಆಗಬೇಕು ಎಂಬ ಮಾತನ್ನು ಅರಿತಿರುವ ಮಹಿಳೆಯರು ಸ್ವಾವಲಂಬಿಗಳಾಗುತ್ತಿದ್ದಾರೆ. ಹೊಸ ಸಮಾಜ ನಿರ್ಮಾಣಕ್ಕೆ ಹೆಣ್ಣಿನ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿ ಕಾ ಮಾತನಾಡಿ, ಇಂದು ಹೆಣ್ಣುಮಕ್ಕಳು ಕಾಲಿರಿಸದ ಕ್ಷೇತ್ರವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ಸಾಧನೆಯತ್ತ ಮುಖ ಮಾಡಿದ್ದಾರೆ. ಬಡತನ ಇನ್ನಿತರ ಕಾರಣಕ್ಕೆ ಹೆಣ್ಣಿಗೆ ಬೇಗ ಮದುವೆ ಮಾಡಲಾಗುತ್ತಿದೆ. ಅಪ್ರಾಪ್ತ ಮಕ್ಕಳನ್ನು ಮದುವೆ ಮಾಡಲು ಮುಂದಾದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಹಿಳೆಯರಿಗೆ ಶಿಕ್ಷಣ ನೀಡಿದರೆ ಸಮಾಜದಲ್ಲಿ ದೊಡ್ಡ ಹುದ್ದೆಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಪೋಷಕರು ಮಕ್ಕಳ ಸಾಧನೆಗೆ ಒತ್ತಾಸೆಯಾಗಿ ನಿಲ್ಲಬೇಕು ಎಂದರು.

ಉಪ್ಪಾರ ನಿಗಮದ ಅಧ್ಯಕ್ಷ ಗಿರೀಶ್‌ ಉಪ್ಪಾರ್‌, ಉಪ್ಪಾರ ಕುಲಶಾಸ್ತ್ರ ಅಧ್ಯಯನ ಸಮಿತಿ ಅಧ್ಯಕ್ಷ ಡಾ| ಮೇತ್ರಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ| ದ್ವಾರಕಾನಾಥ್‌, ಹೃದಯ ರೋಗ ತಜ್ಞ ಡಾ| ಮಂಜುನಾಥ್‌, ಜಯದೇವ ಆಸ್ಪತ್ರೆ ವೈದ್ಯ ಡಾ| ಶಂಕರ್‌, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ, ಸಿಐಡಿ ಎಸ್‌ಪಿ ರವಿ ಡಿ. ಚನ್ನಣ್ಣನವರ್‌ ವಿವಿಧ ವಿಷಯಗಳ ಕುರಿತು ಮಾತನಾಡಿದರು.

ಬಡತನ ಇನ್ನಿತರ ಕಾರಣಕ್ಕೆ ಹೆಣ್ಣಿಗೆ ಬೇಗ ಮದುವೆ ಮಾಡಲಾಗುತ್ತಿದೆ. ಅಪ್ರಾಪ್ತ ಮಕ್ಕಳನ್ನು ಮದುವೆ ಮಾಡಲು ಮುಂದಾದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಹಿಳೆಯರಿಗೆ ಶಿಕ್ಷಣ ನೀಡಿದರೆ ಸಮಾಜದಲ್ಲಿ ದೊಡ್ಡ ಹುದ್ದೆಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಪೋಷಕರು ಮಕ್ಕಳ ಸಾಧನೆಗೆ ಒತ್ತಾಸೆಯಾಗಿ ನಿಲ್ಲಬೇಕು. –ಜಿ. ರಾಧಿಕಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.