ಯುವ ಪೀಳಿಗೆಗೆ ಭಗತ್‌ಸಿಂಗ್ ಆದರ್ಶ ಮಾದರಿಯಾಗಲಿ
Team Udayavani, Sep 29, 2018, 1:01 PM IST
ಚಿತ್ರದುರ್ಗ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಾವನ್ನು ಲೆಕ್ಕಿಸದೆ ಹೋರಾಡಿದ ಮಹಾನ್ ಕ್ರಾಂತಿಕಾರಿ ಭಗತ್‌ಸಿಂಗ್ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು. ನಗರದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್, ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಶುಕ್ರವಾರ ಭಗತ್‌ಸಿಂಗ್ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಡೀ ದೇಶದ ಜನತೆಗೆ ಭಗತ್‌ಸಿಂಗ್ ಮಾದರಿಯಾಗಿದ್ದಾರೆ. ಮುಕ್ತ ಸ್ವಾತಂತ್ರ್ಯದ ಕನಸಿಗಾಗಿ ಅವರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಕೇವಲ ತಮ್ಮ 23ನೇ ವಯಸ್ಸಿನಲ್ಲಿ ಅವರು ವೀರ ಮರಣ ಹೊಂದುವ ಮೂಲಕ ಹುತಾತ್ಮರಾದರು ಎಂದು ತಿಳಿಸಿದರು.
ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಜಿಲ್ಲಾಧ್ಯಕ್ಷ ರವಿಕುಮಾರ್ ಮಾತನಾಡಿ, ಭಗತ್‌ಸಿಂಗ್‌ನಂತಹ ಆದರ್ಶ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ನಡೆಯಬೇದ ಇಂದಿನ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಇಂದಿನ ಯುವಪೀಳಿಗೆ ಭಗತ್‌ಸಿಂಗ್‌ರ ವಿಚಾರಗಳನ್ನು ತಿಳಿಯುವ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಆದರ್ಶ ವ್ಯಕ್ತಿಗಳ ಮಾದರಿಗಳನ್ನು ತೋರಿಸಿಕೊಡಬೇಕಿರುವುದು ಎಲ್ಲ ಪ್ರಜ್ಞಾವಂತರ ಆದ್ಯ ಕರ್ತವ್ಯವಾಗಿದೆ ಎಂದರು. ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಮಾತನಾಡಿ, ಕಳೆದ ಹಲವಾರು ದಿನಗಳಿಂದ ವಿವಿಧ ಜನಪರ ಸಂಘಟನೆಗಳು ಡಿಸಿ ವೃತ್ತದಲ್ಲಿರುವ ಉದ್ಯಾನವನಕ್ಕೆ ಭಗತ್ ಸಿಂಗ್ ಹೆಸರಿಡಬೇಕೆಂದು ಒತ್ತಾಯಿಸಿ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಕೂಡಲೇ ನಗರಸಭೆ ಕ್ರಮ ಕೈಗೊಳ್ಳಬೇಕೆಂದರು.
ಸಂಶೋಧಕ ಡಾ|ಬಿ.ರಾಜಶೇಖರಪ್ಪ ಮಾತನಾಡಿ, ಡಿಸಿ ವೃತ್ತದಲ್ಲಿರುವ ಉದ್ಯಾನವನಕ್ಕೆ ಮಹಾನ್ ದೇಶಪ್ರೇಮಿ ಭಗತ್ ಸಿಂಗ್ ಹೆಸರಿಡುವ ಮೂಲಕ ಅವರಿಗೆ ಸೂಕ್ತ ಗೌರವ ಸಲ್ಲಿಸಬೇಕು. ಅವರ ನೆನಪುಗಳನ್ನು ಹಸಿರಾಗಿಡುವ ಪರಿಪಾಠ ಬೆಳೆಸಬೇಕು. ಡಿಸಿ ವೃತ್ತದಲ್ಲಿರುವ ಉದ್ಯಾನವನವನ್ನು ಭಗತ್ ಸಿಂಗ್ ಅವರ ಹೆಸರಿನಿಂದ ಕರೆಯಬೇಕೆಂಬುದು ನಗರದ ವಿದ್ಯಾರ್ಥಿ ಯುವಜನರ ಮತ್ತು
ನಾಗರಿಕರ ಅಪೇಕ್ಷೆಯಾಗಿದೆ ಎಂದರು.
ನಗರಸಭೆಯ ಪರವಾಗಿ ತಾವು ತಾತ್ವಿಕ ಒಪ್ಪಿಕೊಂಡಿರುತ್ತೀರಿ. ಆದರೆ ಈ ಉದ್ಯಾನಕ್ಕೆ ಭಗತ್‌ಸಿಂಗ್ ಹೆಸರನ್ನು ಅಂತಿಮಗೊಳಿಸುವ ಕಾರ್ಯ ಇನ್ನೂ ಪೂರ್ಣಗೊಳಿಸಿಲ್ಲ. ಆದ್ದರಿಂದ ಭಗತ್‌ಸಿಂಗ್‌ರ 111ನೇ ಜನ್ಮದಿನವಾದ ಇಂದು ಅದೇ ಪಾರ್ಕ್‌ಬಳಿ ಸಾರ್ವಜನಿಕ ಸಭೆ ನಡೆಸಿ ಮತ್ತೂಮ್ಮೆ ಹಕ್ಕೊತ್ತಾಯ ಸಲ್ಲಿಸುತ್ತಿದ್ದೇವೆ. ತಾವು ಆದಷ್ಟು ಜರೂರಾಗಿ ಎಲ್ಲ ಜನರ ಬೇಡಿಕೆಯಂತೆ ಈ ಕಾರ್ಯ ಪೂರ್ಣಗೊಳಿಸಿ ಕೊಡಬೇಕೆಂದು ಕೋರುತ್ತೇವೆ ಎಂದರು.
ನಿವೃತ್ತ ಬ್ಯಾಂಕ್ ನೌಕರ ನರಸಿಂಹಮೂರ್ತಿ, ಸಂಘಟನಾಕರರಾದ ವಿನಯ್, ನಿಂಗರಾಜು, ಕುಮುದ, ಮಾರುತಿ, ಚಂದನ, ಸುಮಲತ, ಬೊಮ್ಮನಾಯ್ಕ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.