ಗಾಳಿ-ಮಳೆಯಿಂದ ಅಡಿಕೆ ಬೆಳೆಗೆ ಹಾನಿ
Team Udayavani, May 13, 2020, 4:15 PM IST
ಭರಮಸಾಗರ: ಸಮೀಪದ ಹೆಗ್ಗೆರೆ ಗ್ರಾಮದಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಗೆ ನೂರಕ್ಕೂ ಹೆಚ್ಚು ಅಡಿಕೆ ಮರಗಳು ಹಾಗೂ ಇತರೆ ಮರಗಳು ಧರೆಗೆ ಉರುಳಿವೆ.
ಹತ್ತಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ. ಉಮೇಶ್ ಎಂಬುವವರ ಅಡಿಕೆ ತೋಟದಲ್ಲಿ 60 ಅಡಿಕೆ ಮರಗಳು, 10 ತೇಗ, ಒಂದು ತೆಂಗಿನಮರ, ತಿಪ್ಪೇಸ್ವಾಮಿ, ಸಿ.ಎನ್. ರಾಜಪ್ಪ ಎಂಬುವವರ ತೋಟದಲ್ಲಿ ತಲಾ 10 ಅಡಿಕೆ ಮರಗಳು, 5 ತೇಗದ ಮರಗಳು, ಯೋಗೀಶ್ ಎಂಬುವವರ ತೋಟದಲ್ಲಿ ಹತ್ತಕ್ಕೂ ಹೆಚ್ಚು ಅಡಿಕೆ ಮರಗಳು ಉರುಳಿ ಬಿದ್ದಿವೆ.ರಸ್ತೆಗೆ ಬೇವಿನ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು.
ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯ ಆಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವಿದ್ಯುತ್ ಪರಿವರ್ತಕ ಕಂಬ ಉರುಳಿ ಗ್ರಾಮದ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಅಲ್ಲಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದ್ದು, ಕಂಬಗಳು ನೆಲಕ್ಕೆ ಬಿದ್ದಿವೆ. ಬಿರುಗಾಳಿ ಮಳೆಯಿಂದ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಬೇಕು ಎಂಬುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.