Bharamasagara ಗ್ರಾಪಂ ಪಿಡಿಒ ಲೋಕಾ ಬಲೆಗೆ
Team Udayavani, Dec 16, 2023, 9:57 PM IST
ಭರಮಸಾಗರ: ಮನೆಯೊಂದರ ಖಾತೆ ಬದಲಾವಣೆ ಮಾಡಿಕೊಡುವ ಸಂಬಂಧ 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಿ.ಎನ್. ಕುಮಾರಸ್ವಾಮಿ ಎಂಬುವರಿಗೆ ಸಂಬಂ ಧಿಸಿದ ಮನೆಯ ಖಾತೆ ಬದಲಾವಣೆ ಸಂಬಂಧ ಪಿಡಿಒ ಶಿವಪ್ಪ 50,000 ರೂ.ಗಳ ಲಂಚಕ್ಕೆ ಹೊಳಲ್ಕೆರೆಯ ಸ್ಟಾಂಪ್ ವೆಂಡರ್ ಕಲ್ಲೇಶ್ ಎಂಬುವವರ ಮೂಲಕ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಹತ್ತು ಸಾವಿರ ರೂ. ಪಡೆದಿದ್ದರು. ಶನಿವಾರ ಭರಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಉಳಿದ ಹಣ 40,000 ರೂಗಳನ್ನು ಸ್ವೀಕರಿಸುವ ವೇಳೆ ಚಿತ್ರದುರ್ಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಡಿಒ ಶಿವಪ್ಪ ಮತ್ತು ಕಲ್ಲೇಶ್ ಅವರನ್ನು ಬಂಧಿ ಸಿದರು.
ಕುಮಾರಸ್ವಾಮಿ ನೀಡಿದ ದೂರು ಆಧರಿಸಿ ಚಿತ್ರದುರ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾಮ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ವೈ.ಎಸ್. ಶಿಲ್ಪಾ, ಬಿ. ಮಂಜುನಾಥ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.