ಬಿಹಾರದಿಂದ ಬಂದ ಐವರಿಗೆ ಕ್ವಾರಂಟೈನ್
Team Udayavani, Jun 10, 2020, 1:19 PM IST
ಸಾಂದರ್ಭಿಕ ಚಿತ್ರ
ಭೀಮಸಮುದ್ರ: ಬಿಹಾರದಿಂದ ಗ್ರಾಮಕ್ಕೆ ಆಗಮಿಸಿದ ಕುಟುಂಬದವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಇದಕ್ಕೆ ಅಕ್ಕಪಕ್ಕದ ಮನೆಯವರು ವಿರೋಧ ವ್ಯಕ್ತಪಡಿಸಿದಾಗ ಆರೋಗ್ಯ ಇಲಾಖೆ ಅಧಿಕಾರಿಗಳು ಅವರಿಗೆ ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ, ಜನರು ಭಯದಿಂದ ಹೊರಬರಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸಮುದಾಯದ ಸಹಕಾರ ಅತ್ಯಗತ್ಯ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬರುವ ಕುಟುಂಬಗಳಿಗೆ ಜೀವಿಸುವ ಮತ್ತು ವಾಸಿಸುವ ಹಕ್ಕು ಇರುತ್ತದೆ. ನಾವೂ ಬದುಕಿ ಬೇರೆಯ ವರಿಗೂ ಬದುಕಲು ಬಿಡೋಣ ಎಂದರು.
ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗ್ಲೌಸ್, ಮಾಸ್ಕ್ ಧರಿಸಿ ಕೈಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿ. ಬೇರೆಯವರನ್ನು ಹೋಂ ಕ್ವಾರಂಟೈನ್ ಮಾಡುವಾಗ ಪ್ರತಿರೋಧ, ಅಡ್ಡಿಪಡಿಸುವುದನ್ನು ಮಾಡಬೇಡಿ. ನಾನು ಕೋವಿಡ್ನಿಂದ ಸುರಕ್ಷಿತವಾಗಿರಬೇಕು, ನನ್ನಿಂದ ಸಮುದಾಯದಲ್ಲಿ ಕೋವಿಡ್ ಹರಡಬಾರದು. ನಿಯಂತ್ರಣ ಹೋರಾಟದಲ್ಲಿ ಆರೋಗ್ಯ ಇಲಾಖೆಗೆ ಸಮುದಾಯಕ್ಕೆ ಯಾವ ರೀತಿಯ ಸಹಕಾರ ನೀಡಬಹುದು ಎಂಬ ಬಗ್ಗೆ ಯೋಚಿಸಿ ಎಂದು ಮನವಿ ಮಾಡಿದರು.
ಬಿಹಾರದಿಂದ ಆಗಮಿಸಿದ ಐದು ಜನರ ಆರೋಗ್ಯ ತಪಾಸಣೆ ನಡೆಸಿ ಗಂಟಲು ದ್ರವವನ್ನು ಸಂಗ್ರಹಿಸಲಾಯಿತು. ಡಾ| ಸಾದಿಕ್‌ವುಲ್ಲಾ, ಪಿಡಿಒ ಬಸಣ್ಣ, ಗ್ರಾಮಲೆಕ್ಕಾಧಿಕಾರಿ ಬಸವರಾಜ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಖಾಸಿಂ ಸಾಬ್, ಆರೋಗ್ಯ ಸಹಾಯಕರಾದ ಮಾರುತಿ, ಪ್ರಸಾದ್, ಗೀತಾ, ಪ್ರಯೋಗಶಾಲಾ ತಂತ್ರಜ್ಞರಾದ ಮೀನಾಕ್ಷಿ, ಮಂಜುಳಾ, ಆಶಾ ಕಾರ್ಯಕರ್ತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.