ರಾಜ್ಯ ಸರ್ಕಾರಕ್ಕೆ ಶಾ ಮಾತಿನೇಟು
Team Udayavani, Jan 11, 2018, 6:00 AM IST
ಹೊಳಲ್ಕೆರೆ(ಚಿತ್ರದುರ್ಗ): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ರಾಜ್ಯದಲ್ಲಿ ಹಿಂದೂ ವಿರೋಧಿ ಮತ್ತು ಭ್ರಷ್ಟ ಆಡಳಿತ ನಡೆಸುತ್ತಿರುವ ಈ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಆ ಮೂಲಕ ಕಾಂಗ್ರೆಸ್ ಮುಕ್ತ ಭಾರತಕ್ಕೆ ಅಂತಿಮ ವೇದಿಕೆ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ 69 ದಿನಗಳನ್ನು ಪೂರೈಸುತ್ತಿದ್ದು, ಸುಮಾರು 8000 ಕಿ.ಮೀ. ಸಂಚರಿಸಿ 174 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶ ನಡೆಸಲಾಗಿದೆ. ಎಲ್ಲೆಡೆ ಯುವಕರು, ಮಹಿಳೆಯರು, ರೈತರು ರಾಜ್ಯ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಿಡಿದೇಳಲು ಸಿದ್ಧರಾಗಿದ್ದಾರೆ. ಇದನ್ನು ನೋಡಿದಾಗ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿರುವುದು ಸ್ಪಷ್ಟವಾಗಿದೆ ಎಂದರು.
ರಾಜ್ಯ ಬಿಜೆಪಿ ಹಮ್ಮಿಕೊಂಡರುವ ಪರಿವರ್ತನಾ ಯಾತ್ರೆ ಅಂಗವಾಗಿ ಹೊಳಲ್ಕೆರೆಯಲ್ಲಿ ಬುಧವಾರ ನಡೆದ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 14ನೇ ಹಣಕಾಸು ಆಯೋಗದ ಮೂಲಕ ಕರ್ನಾಟಕಕ್ಕೆ 2,19,506 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಲ್ಲದೆ, ಇತರೆ ಯೋಜನೆಗಳ ಮೂಲಕ ಹೆಚ್ಚುವರಿಯಾಗಿ ನೀಡಿರುವ 79 ಸಾವಿರ ಕೋಟಿ ರೂ. ಸೇರಿ ಒಟ್ಟಾರೆ 3 ಲಕ್ಷ ಕೋಟಿ ರೂ. ಬಂದಿದೆ. ಆದರೆ, ಈ ಹಣದಲ್ಲಿ ಬಹುಪಾಲನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ರಾಜ್ಯ ಸರ್ಕಾರ ಜನರಿಗೆ ಯೋಜನೆಗಳನ್ನು ತಲುಪಿಸಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.