BJP ತೊಲಗಿಸಬೇಕು, Congress ಆಂಜನೇಯ ಅವರನ್ನು ಗೆಲ್ಲಿಸಬೇಕು: ಎ.ವಿ.ಉಮಾಪತಿ


Team Udayavani, Apr 7, 2023, 11:25 PM IST

1-qwqe

ಹೊಳಲ್ಕೆರೆ: ಭ್ರಷ್ಟ ಬಿಜೆಪಿಯನ್ನು ತೊಲಗಿಸಲು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸನ್ನದ್ಧರಾಗಬೇಕಿದೆ ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಹೇಳಿದರು.

ಪಟ್ಟಣದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರೊಡನೆ ಮೆರವಣಿಗೆ ನಡೆಸಿ ಮಾತನಾಡಿ, ಇಲ್ಲಿಯವರೆಗೂ ಶಾಸಕನಾಗಿದ್ದ ಎಂ.ಚಂದ್ರಪ್ಪ ಮಾಡಿರುವ ಅಭಿವೃದ್ದಿ ಕೆಲಸಗಳು ಒಂದೂ ಕಣ್ಣಿಗೆ ಕಾಣುತ್ತಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ಬಿಜೆಪಿ.ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದರು.

ಡಿ.ದೇವರಾಜ ಅರಸು, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಇವರುಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನೀಡಿದಂತ ಮಹತ್ತರ ಕೊಡುಗೆಗಳನ್ನು ಯಾರಿಂದಲೂ ನೀಡಲು ಸಾಧ್ಯವಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಹೊಳಲ್ಕೆರೆ ತಾಲ್ಲೂಕಿನಾದ್ಯಂತ ತಾ.ಪಂ. ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿದ್ದೆವು. ಹೆಚ್.ಆಂಜನೇಯರವರು ನಾಮಪತ್ರ ಸಲ್ಲಿಸುವ ದಿನದಂದು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ ಬೆಂಬಲಿಸುವಂತೆ ವಿನಂತಿಸಿದರು.

ಹೊಳಲ್ಕೆರೆ ಕ್ಷೇತ್ರದ ಅಭಿವೃದ್ಧಿಗೆ ಎಚ್.ಆಂಜನೇಯ ಸಚಿವರಾದಾಗ ಸಾವಿರಾರು ಕೋಟಿ ಅನುದಾನ ತಂದು ಸರ್ಕಾರಿ ಕಟ್ಟಡ, ವಸತಿ ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಿದರು. ಈಗಿನ ಶಾಸಕರು ಅಭಿವೃದ್ಧಿ ಕಾರ್ಯ ಮಾಡಿಲ್ಲ, ಇದನ್ನು ಕ್ಷೇತ್ರದ ಮತದಾರರಿಗೆ ತಿಳಿಯಪಡಿಸಬೇಕು. ಕಳೆದ ಬಾರಿ ನಮ್ಮಗಳ ಸ್ವಯಂಕೃತ ಅಪರಾಧದಿಂದ ಸೋಲಬೇಕಾಯಿತು. ಈ ಬಾರಿ ದಾಖಲೆ ಮತಗಳ ಅಂತದಿಂದ ಎಚ್.ಆಂಜನೇಯ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಶೋಷಿತರು, ದೀನ ದಲಿತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ದೇಶದಲ್ಲಿ ನೆಮ್ಮದಿಯಾಗಿ ಬದುಕಬೇಕಾಗಿರುವುದರಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಎಂ.ಚಂದ್ರಪ್ಪರನ್ನು ಸೋಲಿಸಿ ಹೆಚ್.ಆಂಜನೇಯವರನ್ನು ಗೆಲ್ಲಿಸಿ ಮತ್ತೊಮ್ಮೆ ಮಂತ್ರಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕೆಂದರು.

ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ಬಿಜೆಪಿ. ಅಳಿಸಿ ಹಾಕುತ್ತಿದೆ. ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ.ಅಧಿಕಾರಕ್ಕೆ ಬರಲು ಬಿಡಬಾರದು. ನಮ್ಮ ಪಕ್ಷದ ಸಾಧನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಬೇಕು. ನಾನು ಕೂಡ ಟಿಕೇಟ್ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರವನ್ನು ಗೌರವಿಸಿ ಭಿನ್ನಾಭಿಪ್ರಾಯ ಬದಿಗೊತ್ತಿ ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿ ಹೆಚ್.ಆಂಜನೇಯರವರನ್ನು ಗೆಲ್ಲಿಸಿಕೊಳ್ಳಲೇಬೇಕು. ಚುನಾವಣೆ ಮುಗಿಯುವತನಕ ಹಗಲು-ರಾತ್ರಿ ಜೊತೆಗಿದ್ದು, ಗೆಲುವಿಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಮಾಜಿ ಸಚಿವ ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಮಾತನಾಡಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚAದ್ರಪ್ಪ ಕೆರೆಕಟ್ಟೆ, ಚೆಕ್‌ಡ್ಯಾಂಗಳನ್ನು ಕಟ್ಟಿಸಿದ್ದೇನೆಂದು ಹೇಳಿ ಕೋಟಿಗಟ್ಟಲೆ ಹಣ ಲೂಟಿ ಹೊಡೆದಿರುವುದೇ ಐದು ವರ್ಷದ ಸಾಧನೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಸೇರಿದಂತೆ ಅನೇಕ ಮಹತ್ವಾಕಾಂಕ್ಷಿ ಯೋಜನೆಯಗಳನ್ನು ಜಾರಿಗೆ ತಂದರು. ಈ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಕೆರೆಕಟ್ಟೆ, ಚೆಕ್‌ಡ್ಯಾಂಗಳನ್ನು ಕಟ್ಟಿಸಿದ್ದೇನೆಂದು ಹೇಳಿ ಕೋಟಿಗಟ್ಟಲೆ ಹಣ ಲೂಟಿ ಹೊಡೆದಿದ್ದಾರೆ. ಮುನ್ನೂರು ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದೇನೆಂದು ಕ್ಷೇತ್ರದ ಜನರಿಗೆ ಸುಳ್ಳು ಹೇಳುವುದನ್ನು ನಿಲ್ಲಿಸಿ ಮೊದಲು ಶ್ವೇತ ಪತ್ರ ಹೊರಡಿಸಲಿ ಬಡವರಿಗೆ ಮನೆ ಕೊಟ್ಟಿದ್ದಲ್ಲದೆ ರೈತರ ಸಾಲ ಮನ್ನ ಮಾಡಿದ್ದು, ಕಾಂಗ್ರೆಸ್ ಪಕ್ಷ. ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಶಾಲಾ-ಕಾಲೇಜು, ಆಸ್ಪತ್ರೆಗಳನ್ನು ಕಟ್ಟಿಸಿದ್ದು, ನನ್ನ ಅಧಿಕಾರವಧಿಯಲ್ಲಿ ಎನ್ನುವುದನ್ನು ಕ್ಷೇತ್ರದ ಜನ ಮರೆಯಬಾರದು ಎಂದರು.

ಶಾಸಕ ಎಂ.ಚಂದ್ರಪ್ಪ ಕ್ಷೇತ್ರದಲ್ಲಿ ಎಲ್ಲಿಯೂ ಕೊಳವೆಬಾವಿ ಕೊರೆಯಿಸಲು ಮುಂದಾಗಿಲ್ಲ. ಕಾರಣ ಇದರಲ್ಲಿ ಹಣ ಲಪಟಾಯಿಸಲು ಆಗುವುದಿಲ್ಲವೆಂದು ರಸ್ತೆ, ಕೆರೆಕಟ್ಟೆಗಳಲ್ಲಿ ಕಮೀಷನ್ ತಿಂದು ತೇಗಿರುವುದು ಸಾಕು. ಹಾಗಾಗಿ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಶಿವಕುಮಾರ್, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧಯಕ್ಷತಾದ ಎಚ್.ಟಿ.ಹನುಮಂತಪ್ಪ, ಎಂ.ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಶಿವಮೂರ್ತಿ, ಆರ್.ನರಸಿಂಹರಾಜ, ಲೋಹಿತ್‌ಕುಮಾರ್, ತಿಪ್ಪೇಸ್ವಾಮಿ, ರಂಗಸ್ವಾಮಿ, ಇಂದಿರಾ ಕಿರಣ್‌ಕುಮಾರ್ ಯಾದವ್, ನಗರ ಘಟಕದ ಅಧ್ಯಕ್ಷ ಮಜರ್ ಉಲ್ಲಾಖಾನ್, ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಭಾರತಿ ಕಲ್ಲೇಶ್, ಗಿರಿಜಮ್ಮ ಬಸವರಾಜ್, ಚಿತ್ತಯ್ಯ, ಮಧುಪಾಲೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.