ರಾಜ್ಯದಲ್ಲೀಗ ಬಿಜೆಪಿ ಸುನಾಮಿ: ಅಮಿತ್
Team Udayavani, Apr 30, 2018, 11:33 AM IST
ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದ್ದು, ಎಲ್ಲೆಡೆ ಜನರು ಪಕ್ಷದ ಪರ ಒಲವು ತೋರಿಸುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ ನೀಡಿರುವ ಎಲ್ಲಾ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ನಗರದ ನೆಹರು ಮೈದಾನದಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯಾಗಿಸಿದ ಸಿದ್ದರಾಮಯ್ಯ ಅವರಿಗೆ ಮದಕರಿ ನಾಯಕ ನೆನಪಾಗಲಿಲ್ಲವೇಕೇ ಎಂದು ಪ್ರಶ್ನಿಸಿದ ಶಾ, ನಾವು ಚಿತ್ರದುರ್ಗದಲ್ಲಿ ಮದಕರಿ ನಾಯಕನ ಭವ್ಯ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಅಲ್ಲದೆ ವಿವಿ ಸಾಗರ ಜಲಾಶಯಕ್ಕೆ 5 ಟಿಎಂಸಿ ನೀರು ಹರಿಸುತ್ತೇವೆ ಎಂದರು.
ಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ಇಲ್ಲಿನ ಶಾಸಕರು ಹಿರಿಯೂರು ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕ್ಷೇತ್ರ ಬರಗಾಲ ಎದುರಿಸುತ್ತಿದೆ. ಹೀಗಿದ್ದರೂ ಕಳೆದ 10 ವರ್ಷಗಳಲ್ಲಿ ಸ್ಥಳೀಯ ಶಾಸಕರು ವಿಧಾನಸಭೆ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ ಎಂದು ಟೀಕಿಸಿದರು. ಹಿರಿಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ,
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ತಂದೆ ಎ. ಕೃಷ್ಣಪ್ಪ ಕೆಲವೇ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಅವರ ಆಸೆಯಂತೆ ಈ ಭಾಗದ ಜನರ ಸೇವೆ ಮಾಡಲು ನಾನು ಸ್ಪರ್ಧಿಸಿದ್ದೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಡಿ.ಟಿ. ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಳ್ಳಕೆರೆ ಕ್ಷೇತ್ರದ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ, ಹೊಸದುರ್ಗ ಕ್ಷೇತ್ರದ ಅಭ್ಯರ್ಥಿ ಗೂಳಿಹಟ್ಟಿ ಶೇಖರ್, ಹೊಳಲ್ಕೆರೆ ಕ್ಷೇತ್ರದ ಅಭ್ಯರ್ಥಿ ಎಂ. ಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್, ಮಾಜಿ ಶಾಸಕ ಆರ್. ರಾಮಯ್ಯ, ಮುಖಂಡರಾದ ಸಿದ್ದೇಶ್ ಯಾದವ್, ಮುರಳಿ, ಲಿಂಗಮೂರ್ತಿ, ಟಿ.ಜಿ. ನರೇಂದ್ರನಾಥ್, ದ್ಯಾಮೇಗೌಡ, ಯಶವಂತ್, ಟಿ. ಚಂದ್ರಶೇಖರ್, ಎಚ್.ಎನ್. ನರಸಿಂಹಯ್ಯ, ಕೇಶವಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.