ಅಂತರ್ಜಲ ವೃದ್ಧಿಗೆ ಚೆಕ್‌ಡ್ಯಾಂ ನಿರ್ಮಿಸಿ: ಕೃಷ್ಣಭೈರೇಗೌಡ

Team Udayavani, Nov 24, 2018, 4:22 PM IST

cta-2.jpg

ಮೊಳಕಾಲ್ಮೂರು: ತಾಲೂಕಿನಲ್ಲಿ ಹೆಚ್ಚಿನ ಹಳ್ಳಗಳು ಹರಿಯುತ್ತಿರುವುದರಿಂದ ಅಂತರ್ಜಲ ವೃದ್ಧಿಸಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಹೆಚ್ಚಿನ ಪ್ರಮಾಣದಲ್ಲಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಪಂಚಾಯತ್‌ ರಾಜ್‌ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ರಾಂಪುರ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಮಲ್ಟಿ ಆರ್‌ ಚೆಕ್‌ ಡ್ಯಾಂಗೆ ಭೇಟಿ ನೀಡಿ ಪೂರ್ಣಗೊಂಡ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಸತತವಾಗಿ ಮಳೆಯ ಕೊರತೆಯಿದ್ದರೂ ಅಲ್ಪ ಮಳೆಗೆ ಕೆಲವೆಡೆ ನಿರ್ಮಾಣಗೊಂಡ ಮಲ್ಟಿ ಆರ್‌ ಚೆಕ್‌ ಡ್ಯಾಂನಲ್ಲಿ ಹೆಚ್ಚಿನ ಪ್ರಮಾಣ ನೀರು ಸಂಗ್ರಹವಾಗಿದೆ. ಹೆಚ್ಚಿನ ಹಳ್ಳಗಳು ಹರಿಯುತ್ತಿರುವ ಪರಿಣಾಮ ಮಳೆಯ ನೀರನ್ನು ಹರಿಬಿಡದಂತೆ ಸಂಗ್ರಹಿಸಿ ಅಂತರ್ಜಲ ಹೆಚ್ಚಿಸಲು ಹೆಚ್ಚಿನ ಪ್ರಮಾಣದಲ್ಲಿ ಮಲ್ಟಿ ಆರ್‌ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ನಿವಾರಿಸಬಹುದಾಗಿದೆ ಎಂದರು.

ಸಹಾಯಕ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮಾತನಾಡಿ, ನಿಯಮಾನುಸಾರ ಹೆಚ್ಚಿನ ಮಲ್ಟಿ ಆರ್ ಚೆಕ್‌ ಡ್ಯಾಂಗಳನ್ನು ನಿರ್ಮಾಣ ಮಾಡಲು ಮೇಲಧಿಕಾರಿಗಳ ಅನುಮೋದನೆ ಪಡೆದು ಈ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಂತರ ತಾಲೂಕಿನ ತಮ್ಮೇನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಚೆಕ್‌ ಡ್ಯಾಂ ಹೂಳೆತ್ತುವ ಕಾಮಗಾರಿ ವೀಕ್ಷಿಸಿದರು. ಅಲ್ಲಿಂದ ಹಾನಗಲ್‌ ಗ್ರಾಪಂ ವ್ಯಾಪ್ತಿಯ ಪೂಜಾರಹಟ್ಟಿ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಎಸ್‌. ತಿಪ್ಪಣ್ಣ ನ ತೋಟದಲ್ಲಿ ಬೆಳೆದ ನುಗ್ಗೇಕಾಯಿ ಬೆಳೆಯ ಬಗ್ಗೆ ಪರಿಶೀಲಿಸಿದರು. ನಿಗಗೊಂಡಿದ್ದ ಹಾನಗಲ್‌ ಪ್ರವಾಸಿ ಮಂದಿರ , ತಾಲೂಕಿನ ಸಿದ್ದಯ್ಯನಕೋಟೆ , ಮುತ್ತಿಗಾರ ಹಳ್ಳಿ ಗಳಿಗೆ ಭೇಟಿ ನೀಡದೆ ತೆರಳಿದರು.

ಸಂಸದ ಬಿ.ಎನ್‌. ಚಂದ್ರಪ್ಪ, ಜಿಪಂ ಅಧ್ಯಕ್ಷೆ ಸೌಭಾಗ್ಯಮ್ಮ ಬಸವರಾಜನ್‌, ಉಪಾಧ್ಯಕ್ಷೆ ಎನ್‌. ವೈ. ಸುಶೀಲಮ್ಮ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಮುಂಡ್ರಿಗಿ ನಾಗರಾಜ್‌, ಸದಸ್ಯರಾದ ಡಾ| ಬಿ. ಯೋಗೇಶ್‌ ಬಾಬು, ಓಬಳೇಶ್‌, ಸಿಇಒ ರವೀಂದ್ರ, ತೋಟಗಾರಿಕೆ ಉಪ ನಿರ್ದೇಶಕಿ ಸವಿತಾ, ಜಿಪಂ ಉಪ ಕಾರ್ಯದರ್ಶಿ ಬಸವರಾಜ್‌, ಜಿಪಂ ಯೋಜನಾಧಿಕಾರಿ ಓಂಕಾರಪ್ಪ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ್‌, ಸದಸ್ಯ ಎ.ಕೆ. ಮಂಜುನಾಥ, ತಾಪಂ ಇಒ ಡಾ| ಶ್ರೀಧರ್‌ ಐ ಬಾರಕೇರ್‌ ಇತರರು ಇದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.