ಕಟ್ಟಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ದೊರೆಯಲಿ
Team Udayavani, Nov 11, 2020, 9:26 PM IST
ಚಿತ್ರದುರ್ಗ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನಿಜವಾದ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸಬೇಕು. ಸರ್ಕಾರದ ಸೌಲಭ್ಯಕ್ಕಾಗಿ ನೋಂದಾಯಿಸಿಕೊಂಡಿರುವ ವಂಚಕರನ್ನು ದೂರವಿಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.
ಮಂಡಳಿ ರಚನೆಯಾದ ಉದ್ದೇಶ ಈಡೇರಿಲ್ಲ. ನಿಜವಾದ ಕಾರ್ಮಿಕರು ಮಂಡಳಿಯಲ್ಲಿ ನೋಂದಾಯಿಸಲು ಹೋದರೆ ಒಂದು ದಿನದ ಕೂಲಿ ನಷ್ಟವಾಗುತ್ತದೆ ಎಂದು ಕೆಲಸ ಮಾಡುತ್ತಿದ್ದಾರೆ. ಇದರ ಲಾಭವನ್ನು ಬೇರೆಯವರು ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಿ ನಿಜವಾದ ಕಾರ್ಮಿಕರನ್ನು ಗುರುತಿಸಬೇಕುಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಂಡಳಿಯಿಂದ ನೀಡುವ ಮದುವೆ ಸಹಾಯಧನವನ್ನು 2 ಲಕ್ಷ ರೂ.ಗೆ ಹೆಚ್ಚಿಸಿ ಠೇವಣಿ ಇಡದಂತೆ ಮೊದಲಿನಂತೆ ಮುಂದುವರೆಸಬೇಕು. ಹೆರಿಗೆ ಸಹಾಯಧನವನ್ನು 50 ಸಾವಿರ ರೂ. ಗೆ ಹೆಚ್ಚಿಸುವುದು, ಕಟ್ಟಡ ಕಾರ್ಮಿಕರು ಕೆಲಸಕ್ಕೆ ಹೋಗುವ ಮತ್ತು ಬರುವ ಸಮಯದಲ್ಲಿ ಅಪಘಾತವಾದರೆ 8 ಲಕ್ಷ ರೂ. ಪರಿಹಾರ ನೀಡುವುದು, ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ. ಸಹಾಯಧನ ನೀಡಬೇಕು. ಕಟ್ಟಡ ಕಟ್ಟುವ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆಕೋವಿಡ್ ಸಂದರ್ಭದಲ್ಲಿ ಘೋಷಣೆ ಮಾಡಿದ ಪರಿಹಾರ ಹಣ ಕೆಲವು ಕಾರ್ಮಿಕರಿಗೆ ತಲುಪಿಲ್ಲ. ಕೂಡಲೇ ಅವರ ಖಾತೆಗೂ ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.
ಎಐಟಿಯುಸಿ ಗೌರವಾಧ್ಯಕ್ಷ ಸಿ.ವೈ. ಶಿವರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ರಾಜ್ಯ ಮಂಡಳಿ ಸದಸ್ಯ ಟಿ.ಆರ್. ಉಮಾಪತಿ, ದೊಡ್ಡಉಳ್ಳಾರ್ತಿ ಕರಿಯಣ್ಣ, ಜಾಫರ್ ಶರೀಫ್, ಕೆ.ಎನ್. ರಮೇಶ್, ಕುಮಾರ್, ಕೌಸರ್, ಬಿ.ರಾಜಪ್ಪ, ಸೋಮಶೇಖರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.