ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ದೆಹಲಿಗೆ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Oct 22, 2022, 11:46 AM IST
ಚಿತ್ರದುರ್ಗ: ಶೀಘ್ರದಲ್ಲೇ ದೆಹಲಿಗೆ ಹೋಗುತ್ತೇನೆ. ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎನ್ನುವುದನ್ನು ಮುಂದೆ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೊಸದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಮಹತ್ಚದ ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿವರ್ತಿಸಲು ನಿರಂತರವಾಗಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈಗಾಗಲೇ ಕೇಂದ್ರ ಜಲಶಕ್ತಿ ಆಯೋಗದಿಂದ ಒಪ್ಪಿಗೆ ದೊರೆತಿದೆ. ನೀರಾವರಿ ಸಚಿವರು ಗಮನಿಸುತ್ತಿದ್ದಾರೆ ಎಂದರು. ಇದು ರಾಜ್ಯದ ಮೊದಲ ನೀರಾವರಿ ಯೋಜನೆ ಆಗಲಿದೆ ಎಂದು ಹೇಳಿದರು.
ಇದನ್ನೂ ಓದಿ:ಲೈಂಗಿಕ ತಜ್ಞೆ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ: ಅಶ್ಲೀಲ ಚಿತ್ರ ಕಳುಹಿಸಿ ಕಿರುಕುಳ;ಸೆರೆ
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗಕ್ಕೆ ಆದಷ್ಟು ಬೇಗ ಅಡಿಗಲ್ಲು ಹಾಕಲಾಗುವುದು. ಅಗತ್ಯವಿರುವ 100 ಕೋಟಿ ರೂ. ಅನುದಾನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಶೇ.70 ರಷ್ಟು ಮಳೆ ಹೆಚ್ಚಾಗಿದೆ. ಹಿಂಗಾರು ಬೆಳೆ ಹಾನಿ 34 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. 83693 ಹೆಕ್ಟೇರ್ ಬೆಳೆ ನಷ್ಟ ಆಗಿದೆ ಎಂದರು.
ಎಸ್ಸಿ, ಎಸ್ಟಿ ಮೀಸಲಾತಿ ಕಾರಣಕ್ಕೆ ಸ್ವಾಮೀಜಿ ಧರಣಿ ಕುಳಿತಿದ್ದರು. ನಮ್ಮ ಸರ್ಕಾರ ಸ್ಪಂದಿಸಿ, ಪರಿಶಿಷ್ಟರ ಮೀಸಲಾತಿಗೆ ಇಚ್ಛಾಶಕ್ತಿ ಇದ್ದಿದ್ದಕ್ಕೆ ಮಾಡಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.