![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 1, 2020, 6:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಳ್ಳಕೆರೆ: ಕಳೆದ ಸುಮಾರು ನಾಲ್ಕು ತಿಂಗಳುಗಳಿಂದ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ತಾಲೂಕು ಆಡಳಿತ ಕೋವಿಡ್ ವೈರಾಣು ನಿಯಂತ್ರಣದಲ್ಲಿ ಹಲವಾರು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಈ ಭಾಗದಲ್ಲಿ ಹೆಚ್ಚು ವ್ಯಾಪಿಸದಂತೆ ನಿಗಾವಹಿಸಿದೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಆರೋಗ್ಯ ಇಲಾಖೆ ಸಾಕಷ್ಟು ಶ್ರಮವಹಿಸಿದರೂ ನಿರೀಕ್ಷಿತ ಫಲಿತಾಂಶ ಲಭ್ಯವಾಗಿಲ್ಲ. ಖಾಸಗಿ ಆಸ್ಪತ್ರೆ ವೈದ್ಯರು ತಾಲೂಕು ಆಡಳಿತದೊಂದಿಗೆ ಸಹಕರಿಸಲು ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್ ಮನವಿ ಮಾಡಿದರು.
ಮಂಗಳವಾರ ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ನಗರದ ಖಾಸಗಿ ನರ್ಸಿಂಗ್ ಹೋಂ ಮತ್ತು ಖಾಸಗಿ ವೈದ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ವೈರಾಣು ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಾಗದು, ಬದಲಾಗಿ ಈ ಬಗ್ಗೆ ಹೆಚ್ಚು ತಿಳಿದುಕೊಂಡಿರುವ ವೈದ್ಯರ ಸಮೂಹ ಸಹಕಾರ ನೀಡಬೇಕಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನಗರದ ಎಲ್ಲಾ ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.
ತಾಪಂ ಇಒ ಶ್ರೀಧರ್ ಐ. ಬಾರಕೇರ್ ಮಾತನಾಡಿ, ತಾಲೂಕು ಆಡಳಿತ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೈರಾಣು ತಡೆಗೆ ಕಾರ್ಯಕ್ರಮ ರೂಪಿಸಿ ಯಶಸ್ವಿಯಾಗಿದೆ. ಆದರೂ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೈರಾಣು ಬಾಧಿತರಿದ್ದಾರೆ. ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕೆಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ಮಾತನಾಡಿ, ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿನಿತ್ಯ ಪ್ರತ್ಯೇಕ ದಾಖಲಾತಿ ಪುಸ್ತಕದಲ್ಲಿ ರೋಗಿಗಳ ಸಂಪೂರ್ಣ ಮಾಹಿತಿಯನ್ನು ನಮೂದಿಸಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ನೀಡಬೇಕು. ವಿಶೇಷವಾಗಿ ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ತುರ್ತು ಗಮನಹರಿಸಬೇಕೆಂದರು. ಡಾ| ಕೆ.ಎಂ. ಜಯಕುಮಾರ್, ಡಾ| ಲೋಕೇಶ್, ಶ್ರೀನಿವಾಸ್, ಎಲ್.ಎಸ್. ವೀರೇಶ್ ಇತರರಿದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.