![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 17, 2020, 1:05 PM IST
ಚಳ್ಳಕೆರೆ: ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಕೋವಿಡ್ ಸೋಂಕಿತ ವ್ಯಕ್ತಿ ಹಾಗೂ ಆತನ ಸಂಬಂಧಿಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ಎಸ್.ರೋಷನ್ ಜಮೀರ್ ತಿಳಿಸಿದ್ದಾರೆ.
ಯಾವುದೇ ಅನುಮತಿ ಪಡೆಯದೆ ತಮಿಳುನಾಡಿನ ಚೆನ್ನೈನಿಂದ ಕೋಡಿಹಳ್ಳಿಗೆ ಆಗಮಿಸಿದ್ದರಲ್ಲದೆ ಎಲ್ಲೆಂದರಲ್ಲಿ ಓಡಾಡಿಕೊಂಡು ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್ ದೂರಿನಂತೆ ಆ ವ್ಯಕ್ತಿ ವಿರುದ್ಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ಸೋಂಕಿತ ತಮಿಳುನಾಡಿನ ಚೆನ್ನೈನಿಂದ ಖಾಸಗಿ ವಾಹನದಲ್ಲಿ ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಆಂಧ್ರಪ್ರದೇಶ ಹಾಗೂ ಮೊಳಕಾಲ್ಮೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಯಾವುದೇ ಅನುಮತಿ ಪಡೆಯದೆ ನಿರಂತರ ಪ್ರವಾಸ ಕೈಗೊಂಡಿದ್ದ. ಇದರಿಂದ ಕೋಡಿಹಳ್ಳಿ ಹಾಗೂ ಚಿಕ್ಕಹಳ್ಳಿ ಸೀಲ್‌ಡೌನ್ ಆಗಿದ್ದು, ಸಾರ್ವಜನಿಕರ ಅಶಾಂತಿಗೂ ಕಾರಣವಾಗಿರುತ್ತಾನೆ. ಈ ಹಿನ್ನೆಲೆಯಲ್ಲಿ ಈತ ಹಾಗೂ ಈತನ ಸಂಬಂಧಿಕನ ಮೇಲೆ ನ್ಯಾಷನಲ್ ಡಿಸಾಷ್ಟರ್ ಮ್ಯಾನೇಜ್‌ಮೆಂಟ್ ಅಥಾರಟಿ ಆ್ಯಕ್ಟ್-2005ರ ಸೆಕ್ಷನ್-51, 60 ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.