ಕೋವಿಡ್ ನಿಂದ ಭೀತಿಗೊಳಗಾಗದಿರಿ
Team Udayavani, May 17, 2020, 5:25 PM IST
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಕೋಡಿಹಳ್ಳಿಯಲ್ಲಿ ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಮತ್ತು ಚಿಕ್ಕಹಳ್ಳಿ ಗ್ರಾಮಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಜನರ ಆರೋಗ್ಯ ಹಾಗೂ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಹಾಗಾಗಿ ಯಾರೂ ಸಹ ಆತಂಕಕ್ಕೆ ಒಳಗಾಗದೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಎರಡು ಗ್ರಾಮಗಳು ಸೀಲ್‌ಡೌನ್ ಆಗಿದ್ದರಿಂದ ಸುತ್ತಮುತ್ತಲಿನ ಗ್ರಾಮಗಳ ಜನರು ಭಯಭೀತರಾಗಿದ್ದಾರೆ. ತಮಿಳುನಾಡಿನಿಂದ ಕಾನೂನು ಬಾಹಿರವಾಗಿ ಕೋಡಿಹಳ್ಳಿಗೆ ಬಂದ ವ್ಯಕ್ತಿಯಿಂದ ಈ ಅವಘಡ ಸಂಭವಿಸಿದೆ. ಕೋಡಿಹಳ್ಳಿ ಮತ್ತು ಚಿಕ್ಕಹಳ್ಳಿ ಗ್ರಾಮದ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಸರ್ಕಾರ ನಿಮ್ಮ ಬೆನ್ನ ಹಿಂದೆ ಇದ್ದು ನಿಮ್ಮನ್ನು ರಕ್ಷಿಸಲಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡುವಂತೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.