ಕೋವಿಡ್ ನಿಯಂತ್ರಣಕ್ಕೆ ಜನತೆ ಸಹಕಾರ ಅಗತ್ಯ: ರಘುಮೂರ್ತಿ
Team Udayavani, Jun 1, 2020, 1:17 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕವಾಗಿ ಬಂದ ಆಹಾರ ಕಿಟ್ ಗಳನ್ನು ಬಡವರು ಹಾಗೂ ಅಂಗವಿಕಲರಿಗೆ ನೀಡಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯತ್ ಆವರಣದಲ್ಲಿ ಅಂಗವಿಕಲರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಕಳೆದ ಎರಡು ತಿಂಗಳುಗಳಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರು ಲಾಕ್‌ಡೌನ್ ಹಿನ್ನೆಲೆಯಲ್ಲಿ ಅನೇಕ ರೀತಿಯ ಸಂಕಷ್ಟಗಳಿಗೆ ಒಳಗಾಗಿದ್ಧಾರೆ. ಸರ್ಕಾರದ ಪರಿಹಾರ ಜನರಿಗೆ ತಲುಪುವುದು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಆಹಾರದ ಕಿಟ್‌ಗಳನ್ನು ನೀಡಿ ಬಡವರಿಗೆ ವಿತರಿಸಲು ನೆರವಾಗಿದ್ದಾರೆ. ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರು ಭಯಪಡದೆ ಕೋವಿಡ್ ವೈರಾಣು ನಿಯಂತ್ರಣದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಬೇಕೆಂದರು.
ದೇವರಮರಿಕುಂಟೆ, ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿನ ಅಂಗವಿಕಲರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು. ಜಿಪಂ ಮಾಜಿ ಸದಸ್ಯ ಟಿ. ರವಿಕುಮಾರ್, ತಾಪಂ ಸದಸ್ಯರಾದ ಟಿ. ಗಿರಿಯಪ್ಪ, ಜಿ. ವೀರೇಶ್, ರಂಜಿತಾ, ಗ್ರಾಪಂ ಅಧ್ಯಕ್ಷ ಬಿ.ಸಿ. ಸತೀಶ್‌ಕುಮಾರ್, ಸದಸ್ಯರಾದ ಶೈಲಜಾ ಮಂಜುನಾಥ, ಕುಮಾರಸ್ವಾಮಿ, ರಮೇಶ್‌ಕುಮಾರ್, ಕೋಣಪ್ಪ, ಅಂಜಿನಪ್ಪ, ಶೇಖರಪ್ಪ, ಮಹಂತೇಶ್, ತಿಪ್ಪೇಸ್ವಾಮಿ, ಪಿಡಿಒಗಳಾದ ರಾಮಚಂದ್ರಪ್ಪ, ಶಶಿಕಲಾ, ಇರ್ಫಾನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.