ಕೋವಿಡ್ ನಿಯಂತ್ರಣಕ್ಕೆ ಯತ್ನ: ಡಾ| ಪ್ರೇಮಸುಧಾ
Team Udayavani, Jun 10, 2020, 2:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಾಕಷ್ಟು ಪರಿಶ್ರಮ ವಹಿಸಿದೆ. ನಗರದ ಹೊರವಲಯದಲ್ಲಿರುವ ಹಾಸ್ಟೆಲ್‌ನಲ್ಲಿ 23 ಜನ ಕೋವಿಡ್ ಪಾಸಿಟಿವ್ ಸೋಂಕಿತ ವ್ಯಕ್ತಿಗಳಿದ್ದು, ಅವರೂ ಸಹ ಗುಣಮುಖರಾಗುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಎನ್. ಪ್ರೇಮಸುಧಾ ತಿಳಿಸಿದ್ದಾರೆ.
ಕೋವಿಡ್ ವೈರಾಣು ಯಾವ ಸಂದರ್ಭದಲ್ಲಿ ಯಾವ ರೀತಿ ಹಬ್ಬುತ್ತದೆ ಎಂಬ ಬಗ್ಗೆ ಖಚಿತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಕೆಲವೊಮ್ಮೆ ದಿಢೀರನೇ ಈ ವೈರಾಣು ಹಲವಾರು ಜನರಿಗೆ ಹಬ್ಬುವ ಮೂಲಕ ಜನರಲ್ಲಿ ಆತಂಕವನ್ನುಂಟು ಮಾಡುತ್ತದೆ. ಹೋಂ ಕ್ವಾರಂಟೈನ್‌ನಲ್ಲಿರುವ ಪಾಸಿಟಿವ್ ವ್ಯಕ್ತಿಗಳ ಎರಡನೇ ಹಂತದ ಗಂಟಲು ದ್ರವ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ಫಲಿತಾಂಶ ಬರಲಿದೆ. ನಂತರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಾಲೂಕು ಆಡಳಿತದ ಸಹಕಾರದೊಂದಿಗೆ ಅವರ ಆರೋಗ್ಯ ಸುಧಾರಣೆಯಾದಲ್ಲಿ ಮಾತ್ರ ಮೂಲ ಸ್ಥಳವಾದ ಉತ್ತರ ಪ್ರದೇಶಕ್ಕೆ ಕಳುಹಿಸಿಕೊಡಲಾಗುವುದು ಎಂದರು.
ತಾಲೂಕಿನಾದ್ಯಂತ ಕೋವಿಡ್ ವೈರಾಣು ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ಸಿಬ್ಬಂದಿ ವರ್ಗ, ವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು ಕಾರ್ಯ ನಿರ್ವಹಿಸಿವೆ. ಇದರಿಂದ ಕೋವಿಡ್ ವೈರಾಣು ನಿಯಂತ್ರಣ ಸಾಧ್ಯವಾಗಿದೆ. ತಾಲೂಕಿನಾದ್ಯಂತ ಸುಮಾರು 250ಕ್ಕೂ ಹೆಚ್ಚು ಜನರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿದ ಜಿಲ್ಲಾ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.