ಕೋವಿಡ್ ನಿಯಂತ್ರಣದಲ್ಲಿ ಕಾಂಗ್ರೆಸ್ ಉತ್ತಮ ಕಾರ್ಯ
Team Udayavani, May 20, 2020, 5:02 PM IST
ಚಳ್ಳಕೆರೆ: ಕೋವಿಡ್ ವೈರಾಣು ವಿಶ್ವಕ್ಕೆ ಅಂಟಿದ ಕಂಟಕವಾಗಿದ್ದು, ರಾಜ್ಯದಲ್ಲಿ ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಷ್ಟೇ ಉತ್ತಮ ಕಾರ್ಯವನ್ನು ರಾಜ್ಯ ಕಾಂಗ್ರೆಸ್ ಘಟಕವೂ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಮಂಗಳವಾರ ಇಲ್ಲಿನ ಶಾಸಕ ಭವನ ಮುಂಭಾಗದಲ್ಲಿ ಕ್ಷೇತ್ರದ 3912 ವಿಕಲಚೇತರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ ಪಕ್ಷ ಜನತೆಗೆ ಆತ್ಮವಿಶ್ವಾಸವನ್ನು ತುಂಬಿ ನೆರವಿಗೆ ಧಾವಿಸಿದೆ ಎಂದರು.
ರಾಜ್ಯದ ಉದ್ದಗಲಕ್ಕೆ ಕಾಂಗ್ರೆಸ್ ಶಾಸಕರು ಹಾಗೂ ನಾಯಕರು ನಿರಂತರವಾಗಿ ಪ್ರವಾಸ ಕೈಗೊಂಡು ಜನರಲ್ಲಿ ವಿಶ್ವಾಸ ತುಂಬುವ ಕಾರ್ಯ ಮಾಡುತ್ತಿದ್ದಾರೆ. ರಾಜ್ಯದ ಬಡ ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ದೀನದಲಿತರು, ಶೋಷಣೆಗೆ ಒಳಗಾದವರು ಹಾಗೂ ಅಂಗವಿಕಲರಿಗೂ ಸಹ ನೆರವು ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಶಾಸಕ ಟಿ. ರಘುಮೂರ್ತಿ ಕಳೆದ 60 ದಿನಗಳಿಂದ ಕೊರೊನಾ ನಿಯಂತ್ರಣದ ಜೊತೆಗೆ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಶ್ಲಾಘಿ ಸಿದರು.
ಮಾಜಿ ಸಚಿವ ಡಿ. ಸುಧಾಕರ್ ಮಾತನಾಡಿ, ಹಿರಿಯೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷದ ವತಿಯಿಂದ ಬಡವರಿಗೆ ಹಲವಾರು ಸೌಲಭ್ಯವನ್ನು ವಿತರಣೆ ಮಾಡಲಾಗಿದೆ. 2019ರ ಏಪ್ರಿಲ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಕೊರೊನಾ ವೈರಾಣು ಅಪಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಆದರೆ ಸರ್ಕಾರ ನಿರ್ಲಕ್ಷಿಸಿದ್ದರಿಂದ ದೇಶದಲ್ಲಿ ಲಕ್ಷಾಂತರ ಜನರು ಕೊರೊನಾ ವೈರಾಣು ಪೀಡಿತರಾಗಿದ್ದಾರೆ. 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ.ಪರಿಹಾರ ನೀಡುವ ಬಗ್ಗೆ ಪ್ರಚಾರ ಪಡೆಯುತ್ತಿದೆ. ಆದರೆ ವಾಸ್ತವವಾಗಿ ಈ ಹಣ ಜನರಿಗೆ ತಲುಪುತ್ತದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ ಎಂದರು. ಚಳ್ಳಕೆರೆ ಕ್ಷೇತ್ರಕ್ಕೆ ವಿವಿ ಸಾಗರದ ನೀರು ಹರಿಸುವ ವಿಚಾರದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಮಠಾಧಿಧೀಶರು, ರೈತಸಂಘದ ಪ್ರಮುಖರು, ಸಂಘ ಸಂಸ್ಥೆಗಳು, ಪಕ್ಷದ ಮುಖಂಡರು ಕಾರ್ಯನಿರ್ವಹಿಸಿದ್ದಾರೆ. ನೀರು ತರುವ ವಿಚಾರದಲ್ಲಿ ಅನೇಕ ಜನಪರ ಹೋರಾಟಗಳು ನಡೆದಿವೆ.
ಕಾಂಗ್ರೆಸ್ ಪಕ್ಷದ ಅಧಿಕಾರದ ಅವಧಿಯಲ್ಲೂ ಈ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಆದರೆ ಇತ್ತೀಚೆಗೆ ಕೆಲವು ಡೋಂಗಿ ರಾಜಕಾರಣಿಗಳು ನಾವೇ ನೀರು ತಂದಿದ್ದೇವೆಂದು ಸುಳ್ಳು ಪ್ರಚಾರ ಪಡೆಯುತ್ತಿರುವುದು ವಿಷಾದನೀಯ ಎಂದರು. ಅಧ್ಯಕ್ಷತೆ ವಹಿಸಿದ್ದ ಟಿ.ರಘುಮೂರ್ತಿ ಮಾತನಾಡಿ, ಈ ಕ್ಷೇತ್ರದ ಶಾಸಕನಾಗಿ ಮತದಾರರ ಋಣವನ್ನು ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಕ್ಷೇತ್ರದ 3912 ವಿಕಲಚೇತರಿಗೆ ಆಹಾರ ಕಿಟ್ ನೀಡಲಾಗುತ್ತದೆ. ಪ್ರಾರಂಭದ ಹಂತದಲ್ಲಿ ನಗರದ 472 ವಿಕಲಚೇತನರಿಗೆ ನೀಡಿ ನಂತರ ಹೋಬಳಿ ಮಟ್ಟದಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು. ಜಿಪಂ ಸದಸ್ಯರಾದ ಪ್ರಕಾಶ್‌ಮೂರ್ತಿ, ಡಾ| ಬಿ. ಯೋಗೇಶ್‌ಬಾಬು, ಮಾಜಿ ಸದಸ್ಯ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.