ಚಳ್ಳಕೆರೆ ಠಾಣೆ ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನಿವೇಶನ ಸಮಸ್ಯೆಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ
Team Udayavani, Oct 24, 2022, 9:03 AM IST
ಚಿತ್ರದುರ್ಗ : ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಮಾಡುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೋದರ ಮಾವನ ಮಗನಾದ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧವೇ ಯುವತಿ ಠಾಣೆಯಲ್ಲಿ ದೂರು ನೀಡಿದ್ದಾರೆ,
ಘಟನೆ ವಿವರ : ದೂರುದಾರ ಯುವತಿಗೆ ಉಮೇಶ್ ಸೋದರ ಮಾವನ ಮಗನಾಗಬೇಕು, ಉಮೇಶ್ ಕಳೆದ ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು ಆ ವೇಳೆ ನಿವೇಶನದ ಸಮಸ್ಯೆ ಬಗ್ಗೆ ಉಮೇಶ್ ಅವರಲ್ಲಿ ಯುವತಿ ಸಹಾಯ ಕೇಳಿದ್ದಳು ಅದರಂತೆ ಇನ್ಸ್ ಪೆಕ್ಟರ್ ಉಮೇಶ್ ಸಹಾಯ ಮಾಡುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ, ಅಲ್ಲದೆ ತಾನು ಕರೆದಾಗ ಬರುವತೆಯೂ ಹೇಳಿದ್ದಾರೆ ಅದಾದ ಬಳಿಕ ಇನ್ನೊಮ್ಮೆ ಶಿವಮೊಗ್ಗಕ್ಕೆ ಬಂದು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ.
ಅಲ್ಲದೆ ಯುವತಿ ಶಿವಮೊಗ್ಗದಲ್ಲಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರವೆಳಸಿದ್ದಾರೆ ಎನ್ನಲಾಗಿದ್ದು ಇದರಿಂದ ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ.
ಉಮೇಶ್ ಅವರಿಗೆ ಈಗಾಗಲೇ ಇಬ್ಬರು ಹೆಂದಿಯರಿದ್ದು ನನ್ನನ್ನು ಮೂರನೆಯವಳಾಗಿರು ಎಂದು ಹೇಳಿಕೊಂಡಿದ್ದರು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಒಂದು ವೇಳೆ ನಾನು ಹೇಳಿದ ಹಾಗೆ ಕೆಳದಿದ್ದಲ್ಲಿ ನಿಮ್ಮ ನಿವೇಶ ನಿಮಗೆ ಸಿಗದ ಹಾಗೆ ಮಾಡುತ್ತೇನೆ ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಕೂಡಾ ಹಾಕಿದ್ದನಂತೆ.
ಘಟನೆ ಕುರಿತು ಸಿಪಿಐ ಉಮೇಶ್ ವಿರುದ್ಧ ಕಲಂ 376 ಕ್ಲಾಸ್ (2)(k)(n), 323 , 504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಸಿಪಿಐ ಉಮೇಶ್ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ : ಪಾಟ್ನಾ : ಬಟ್ಟೆ ತೊಳೆಯಲು ಹೋದ ನಾಲ್ವರು ಬಾಲಕಿಯರು ಸೇರಿ ಐದು ಮಂದಿ ನಿರುಪಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.