ದುರ್ಗದಲ್ಲಿ ಜ್ವಾಲಾಮುಖೀ?
Team Udayavani, Oct 7, 2018, 6:00 AM IST
ಚಳ್ಳಕೆರೆ (ಚಿತ್ರದುರ್ಗ): ಸತತ ಬರಕ್ಕೆ ತುತ್ತಾಗುತ್ತಿರುವ ತಾಲೂಕಿನ ಜಮೀನೊಂದರ ಭೂಮಿಯ ಕೆಳಭಾಗದಿಂದ ಅಗ್ನಿ ಜ್ವಾಲೆ ಕಾಣಿಸಿಕೊಂಡು “ಜ್ವಾಲಾಮುಖೀ’ಯ ಆತಂಕ ಸೃಷ್ಟಿಸಿದೆ.
ಇಲ್ಲಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ತಿಪ್ಪೇಸ್ವಾಮಿ ಎಂಬವರಿಗೆ ಸೇರಿದ ಜಮೀನಿನಲ್ಲಿ ಕಳೆದ ಮಂಗಳವಾರ (ಅ. 2) ಸಂಜೆ 4 ಗಂಟೆ ಸುಮಾರಿಗೆ ಭೂಮಿಯ ಒಳಭಾಗದಿಂದ ಬೆಂಕಿ ಹೊರ ಹೊಮ್ಮಿದೆ. ಕೆಲ ನಿಮಿಷಗಳ ನಂತರ ಈ ಜ್ವಾಲೆ, ಆರಿದ ಬಳಿಕ ಜ್ವಾಲಾಮುಖೀಯಿಂದ ಉಂಟಾಗುವ ಲಾವಾರಸ ಮಾದರಿ ಕಂಡು ಬಂದಿತ್ತು. ಹೀಗಾಗಿ ಸಣ್ಣ ಪ್ರಮಾಣ ಜ್ವಾಲಾಮುಖೀ ಶಂಕೆ ವ್ಯಕ್ತವಾಗಿದೆ. ಬೆಂಕಿ ಜ್ವಾಲೆ ಕಂಡು ಬಂದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಕಂಬ ಇದ್ದು, ಬೆಂಕಿಯ ಕಾವಿಗೆ ಕಂಬವೂ ಕರಗಿದಂತಾಗಿ ಬಾಗಿಕೊಂಡಿದೆ. ಬೆಸ್ಕಾಂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಂಬ ಬದಲಿಸಿದ್ದಾರೆ.
ಜಮೀನಿನ ಮಾಲೀಕ ತಿಪ್ಪೇಸ್ವಾಮಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜ್ವಾಲೆಯಿಂದ ಕರಗಿದ ವಿದ್ಯುತ್ ಕಂಬದ ತುಂಡನ್ನು ಭೂಗರ್ಭ ಇಲಾಖೆ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಇನ್ನಷ್ಟೇ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.