ಕಾರ್ಮಿಕರ ಆರೋಗ್ಯ ತಪಾಸಣೆ
Team Udayavani, Apr 11, 2020, 1:36 PM IST
ಚಳ್ಳಕೆರೆ: ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕರು.
ಚಳ್ಳಕೆರೆ: ಹೆಗ್ಗೆರೆ ಗ್ರಾಮದ ಬಳಿಯ ಪ್ರಕಾಶ್ ಐರನ್ ಸ್ಪಾಂಜ್ ಖಾಸಗಿ ಕಂಪನಿಗೆ ಕೊರೊನಾ ವೈರಾಣು ನಿಯಂತ್ರಣ ಅಧಿಕಾರಿಗಳ ತಂಡ ಭೇಟಿ ನೀಡಿ ಹೊರ ರಾಜ್ಯದ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿತು.
ಸಾಣಿಕೆರೆ ಪ್ರಾಥಮಿಕ ಕೇಂದ್ರದ ಆಡಳಿತಾಧಿಕಾರಿ ಡಾ| ಪಿ.ಎನ್.ನಾಗರಾಜು ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ. ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಹೊರದೇಶದ ಯಾವುದೇ ವ್ಯಕ್ತಿಗಳಾಗಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮೂಲಕ ಇದರ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು. ಕಂಪನಿಯ ಪ್ರಭಾರ ವ್ಯವಸ್ಥಾಪಕ ರುದ್ರಪ್ಪ ಮಾತನಾಡಿ, ಸ್ಥಳೀಯವಾಗಿ 200, ರಾಜ್ಯದ ವಿವಿಧೆಡೆಯಿಂದ 400 ಜನ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶೇಷವಾಗಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಗುಜರಾತ್ ರಾಜ್ಯಗಳಿಂದ ಆಗಮಿಸಿದ ನೂರಾರು ಜನರು ಕಳೆದ ಸುಮಾರು 6 ತಿಂಗಳಿನಿಂದ ಇಲ್ಲಿನ ಕಾರ್ಯನಿರ್ವಸುತ್ತಿದ್ದಾರೆ. ಕಂಪನಿ ಇಲ್ಲಿಯೇ ಒಂದು ಆಸ್ಪತ್ರೆ ಪ್ರಾರಂಭಿಸಿದ್ದು, ಎಲ್ಲ ಸೌಲಭ್ಯವುಳ್ಳ ಆಂಬ್ಯುಲೆನ್ಸ್ ಸಹ ನಮ್ಮಲ್ಲಿದೆ ಎಂದರು. ತನಿಖಾ ತಂಡದಲ್ಲಿ ನಾಗರಾಜು, ಪ್ರಸನ್ನಕುಮಾರ್, ಎಚ್.ಬಿ. ತಿಪ್ಪೇಸ್ವಾಮಿ, ಮಂಜುನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.