ಸರ್ಕಾರದ ಆದೇಶ ಗೌರವಿಸಿ: ಸಂಸದ
Team Udayavani, Apr 30, 2020, 2:38 PM IST
ಚಳ್ಳಕೆರೆ: ಊಟದ ವ್ಯವಸ್ಥೆಗೆ ಸಂಸದ ಎ. ನಾರಾಯಣಸ್ವಾಮಿ ಚಾಲನೆ ನೀಡಿದರು.
ಚಳ್ಳಕೆರೆ: ಕೋವಿಡ್ ವೈರಾಣು ಸಂಪೂರ್ಣವಾಗಿ ನಿಯಂತ್ರಣಗೊಂಡ ನಂತರ ಭದ್ರಾ ಮೇಲ್ದಂಡೆ ಕಾಮಗಾರಿ ಇನ್ನೂ ಹೆಚ್ಚಿನ ವೇಗ ಪಡೆದುಕೊಳ್ಳಲಿದೆ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.
ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಉಚಿತ ಊಟ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಬಹಳ ವರ್ಷಗಳ ನಂತರ ಈ ಕ್ಷೇತ್ರ ವಿವಿ ಸಾಗರದಿಂದ ನೀರನ್ನು ಪಡೆಯುವ ಭಾಗ್ಯ ಪಡೆದಿದೆ. ಆದರೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಈ ಬಗ್ಗೆ ಅಪಸ್ವರ ಎತ್ತಿದ್ದಾರೆ. ಚಳ್ಳಕೆರೆ ಕ್ಷೇತ್ರಕ್ಕೆ ನೀರು ಬಿಡದಂತೆ ತಡೆದ ಬಗ್ಗೆ ಮಾಹಿತಿ ಬಂದ ಕೂಡಲೇ ಜಲಸಂಪನ್ಮೂಲ ಸಚಿವರು ಹಾಗೂ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದ್ದೇನೆ. ಯಾವುದೇ ಕಾರಣಕ್ಕೂ ಚಳ್ಳಕೆರೆ ಕ್ಷೇತ್ರಕ್ಕೆ ನೀರು ಬಿಡದಂತೆ ತಡೆಯೊಡ್ಡಬಾರದು. ಸಕಾರರದ ಆದೇಶ ಪಾಲನೆಯಾಗಬೇಕು ಎಂದು ಒತ್ತಾಯಿಸಿದ್ದೇನೆ. ಇದರ ಬೆನ್ನಲ್ಲೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರೊಂದಿಗೆ ಮಾತನಾಡಿ, ಸರ್ಕಾರ ಆದೇಶಕ್ಕೆ ಮನ್ನಣೆ ನೀಡುವಂತೆ ತಿಳಿಸಿದ್ದೇನೆ ಎಂದರು.
ಬಿಜೆಪಿ ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ರಾಮದಾಸ್, ಶಿವಪುತ್ರಪ್ಪ, ಸಿದ್ದೇಶ್ಯಾದವ್, ಎನ್. ಮಂಜುನಾಥ, ಕರೀಕೆರೆ ತಿಪ್ಪೇಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.