ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಶೀಘ್ರ ಆದೇಶ ನಿರೀಕ್ಷೆ: ರಘುಮೂರ್ತಿ

Team Udayavani, Apr 26, 2020, 2:36 PM IST

26-April-30

ಚಳ್ಳಕೆರೆ: ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು

ಚಳ್ಳಕೆರೆ: ಕೆಲವೇ ದಿನಗಳಲ್ಲಿ ಎಸ್‌ಎಸ್‌ ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಲಿದ್ದು, ಈ ಬಾರಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ತಾಲೂಕಿನ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ಕೊರೊನಾ ವೈರಸ್‌ ನಿಯಂತ್ರಣದ ಹಿನ್ನೆಲೆಯಲ್ಲಿ ನಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಜೀವ ಸಂರಕ್ಷಣೆಗೆ ಮನೆಯಲ್ಲಿಯೇ ಉಳಿಯುವಂತಹ ಪರಿಸ್ಥಿತಿ ಉಂಟಾಗಿದೆ. ಆದರೆ ಎಸ್‌ಎಸ್‌ ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಮುಂದಿನ ಜೀವನದ ಮಹತ್ವದ ಘಟ್ಟವಾಗಿದ್ದು, ಈ ಹಂತವನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಬೇಕಿದೆ. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ವಿಯಾಗಬೇಕು. ನೀವು ಪ್ರಯತ್ನಪಟ್ಟರೆ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆ ದೊರೆಯುತ್ತದೆ ಎಂದರು.

ವಿಶ್ವಭಾರತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಟಿ. ವೀರಭದ್ರಸ್ವಾಮಿ, ಆದರ್ಶ ಶಾಲೆಯ ಶ್ರೀನಿವಾಸ್‌, ಹಿರೇಹಳ್ಳಿ ಶಾಲೆಯ ಶ್ರೀನಿವಾಸ್‌, ಎಚ್‌ಟಿಟಿ ಶಾಲೆಯ ರಾಜಣ್ಣ, ಸಂಪತ್‌ಕುಮಾರ್‌, ನಾಗಭೂಷಣ, ಪಾಲಯ್ಯ ಮತ್ತಿತರರು ಮಾತನಾಡಿ, ರಜಾ ಕಾಲವಾದರೂ ಶಿಕ್ಷಕರ ಸಹಕಾರದಿಂದ ಆನ್‌ಲೈನ್‌ ಮತ್ತು ವಾಟ್ಸ್‌ಆ್ಯಪ್‌ ಮೂಲಕ ಪ್ರತಿದಿನವೂ ವಿದ್ಯಾರ್ಥಿಗಳಿಗೆ ಹಲವಾರು ವಿಷಯಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಬಂಧ ಗಟ್ಟಿಯಾಗಿದ್ದು ಫಲಿತಾಂಶ ಹೆಚ್ಚಳವಾಗುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್‌. ವೆಂಕಟೇಶಪ್ಪ ಮಾತನಾಡಿ, 2018ನೇ ಸಾಲಿನಲ್ಲಿ ಶೇ. 88, 2019 ರಲ್ಲಿ ತಾಲೂಕಿಗೆ ಶೇ. 90 ಫಲಿತಾಂಶ ದೊರೆತಿತ್ತು. 2020ನೇ ಸಾಲಿನಲ್ಲಿ ಶೇ. 95 ಫಲಿತಾಂಶ ಪಡೆಯುವ ಗುರಿ ಹೊಂದಲಾಗಿದೆ. ತಾಲೂಕಿನ 91 ಪ್ರೌಢಶಾಲೆಗಳಿಂದ 4433 ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆ ನಡೆಸಿದ್ದಾರೆ.

ಪ್ರತಿ ಪ್ರೌಢಶಾಲೆಯಲ್ಲಿ ಗಣಿತ, ವಿಜ್ಞಾನ ಮತ್ತು ಆಂಗ್ಲ ಭಾಷೆ ಬೋಧನೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದ್ದರು. ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ಅಕ್ಷರ ದಾಸೋಹ ಅ ಧಿಕಾರಿ ತಿಪ್ಪೇಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.