ದೇವರ ಎತ್ತುಗಳಿಗೆ ನೀರಿನ ಬರ
ಬೊಮ್ಮದೇವರಹಟ್ಟಿಯಲ್ಲಿ ಹನಿ ನೀರಿಗೂ ಪರದಾಟ
Team Udayavani, Jan 16, 2020, 12:53 PM IST
ಚಳ್ಳಕೆರೆ: ತಾಲೂಕಿನ ನನ್ನಿವಾಳಗ್ರಾಮ ಪಂಚಾಯತ್ ವ್ಯಾಪ್ತಿಯಬೊಮ್ಮದೇವರಹಟ್ಟಿಯಲ್ಲಿರುವ ದೇವರ ಎತ್ತುಗಳು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೊಮ್ಮದೇವರ ಹಟ್ಟಿಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಜಾನುವಾರುಗಳಿದ್ದು, ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಪ್ರತಿ ನಿತ್ಯ ಕಿಲಾರಿಗಳು ದೇವರ ಜಾನುವಾರುಗಳಿಗೆ ಬೇರೆ ಕಡೆಯಿಂದ ನೀರು ತಂದು ಬೊಗಸೆಯಲ್ಲೇ ನೀರನ್ನು ಕುಡಿಸಿ ಅವುಗಳ ಜೀವ ರಕ್ಷಣೆ ಮಾಡುತ್ತಿದ್ದಾರೆ. ಕಿಲೋಮೀಟರ್ ಗಟ್ಟಲೆ ಅಲೆಯುವ ದೇವರ ಎತ್ತುಗಳು ದಣಿವಾಗಿ ಬಾಯಾರಿದಾಗ ನೀರಿಗಾಗಿ ಅಂಗಲಾಚುತ್ತವೆ.
ಆ ಸಂದರ್ಭದಲ್ಲಿ ಕಿಲಾರಿಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಡಿ ನೀರನ್ನು ತಂದು ಸ್ವಲ್ಪ ಕುಡಿಸಿ ದಣಿವಾರಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕಿಲಾರಿಗಳಾದ ಪಾಲಯ್ಯ, ಚಿನ್ನಯ್ಯ, ಜೋಗಯ್ಯ ನೀರು ಒದಗಿಸಲು ಪಡುತ್ತಿರುವ ಪರಿಪಾಟಲು ದೇವರಿಗೇ ಪ್ರೀತಿ.
ಬೊಮ್ಮದೇವರಹಟ್ಟಿಯ ದೇವರ ಎತ್ತುಗಳು ವಾಸವಾಗಿರುವ ಜಾಗದಲ್ಲಿ ಎರಡು ಕೊಳವೆಬಾವಿಗಳಿಂದ ನೀರಿನ ತೊಟ್ಟಿಗಳಿಗೆ ನೀರು ಪೂರೈಕೆಮಾಡಲಾಗುತ್ತಿತ್ತು. ಕಳೆದ ಕೆಲವು ತಿಂಗಳ ಹಿಂದೆ ಬಂದ ಮಳೆಯಿಂದಾಗಿ ನೀರು ಸಮೃದ್ಧವಾಗಿ ಲಭ್ಯವಿತ್ತು. ಆದರೆ ನೀರು ಸರಬರಾಜು
ಮಾಡಲು ಬೆಸ್ಕಾಂ ಕೆಲವೇ ಅಡಿಗಳ ದೂರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಹಾಕಿರುವ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋಗಿ ತಿಂಗಳು ಕಳೆದಿದೆ. ಈ ಬಗ್ಗೆ ಕಿಲಾರಿಗಳು ಹಾಗೂ ಗ್ರಾಮಸ್ಥರು ತಹಶೀಲ್ದಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಟಾನ್ಸ್‌ಫಾರ್ಮರ್ ದುರಸ್ತಿ ಮಾಡಿಸುವಂತೆ ಒತ್ತಾಯಿಸಿದ್ದಾರೆ.
ಟಾನ್ಸ್‌ಫಾರ್ಮರ್ ಸುಟ್ಟು ಹೋದ ಕಾರಣ ದೇವರ ಎತ್ತುಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಕೂಡಲೇ ಟಾನ್ಸ್ ಫಾರ್ಮರ್ ದುರಸ್ತಿ ಮಾಡಿಸಿ
ಅಥವಾ ಬದಲಾಯಿಸಿ ಎಂದು ಮನವಿ ಮಾಡಿದ್ದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ತಾಳಿದ್ದಾರೆ. ಹಾಗಾಗಿ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವ ಸ್ಥಿತಿ ಉಂಟಾಗಿದೆ.
ಕಿಲಾರಿಗಳಿಗೆ ಜಾನುವಾರುಗಳನ್ನು ರಕ್ಷಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ. ಇಷ್ಟೆಲ್ಲ ಆದರೂ ಬೆಸ್ಕಾಂ ಅಧಿಕಾರಿಗಳು ಮಾತ್ರ ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ತಾಳಿರುವುದು ಕಿಲಾರಿಗಳು ಹಾಗೂ ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ.
ಕೆ.ಎಸ್. ರಾಘವೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.