ವೈದ್ಯರ ಹುದ್ದೆ ಭರ್ತಿಗೆ ಕ್ರಮ: ಶ್ರೀರಾಮುಲು

ಸ್ಥಳೀಯವಾಗಿ ಲಭ್ಯವಿರುವ ವೈದ್ಯರ ಮನವೊಲಿಸಿ ಸೇವೆಗೆ ಬಳಸಿಕೊಳ್ಳಲು ಡಿಎಚ್‌ಒಗಳಿಗೆ ಅನುಮತಿ

Team Udayavani, Jan 15, 2020, 3:29 PM IST

15-January-20

ಚಳ್ಳಕೆರೆ: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆ ಖಾಲಿ ಇದ್ದು, ಕೆಪಿಎಸ್‌ಸಿ ಮೂಲಕ ವೈದ್ಯರ ನೇಮಕ ತಡವಾಗುತ್ತಿದೆ. ಹಾಗಾಗಿ ಸ್ಥಳೀಯವಾಗಿ ಲಭ್ಯವಿರುವ ಎಂಬಿಬಿಎಸ್‌ ವೈದ್ಯರನ್ನು ಸೇವೆಗೆ ನಿಯೋಜಿಸಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.

ಸುಮಾರು ಎರಡು ಸಾವಿರ ವೈದ್ಯರ ನೇಮಕಕ್ಕೆ ಚಿಂತನೆ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 6.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿ ಅವರು ಮಾತನಾಡಿದರು. ಆಸ್ಪತ್ರೆಗಳಲ್ಲಿ ವೈದ್ಯರೊಂದಿಗೆ ಸದಾ ಕಾಲ ರೋಗಿಯ ಸೇವೆಮಾಡುವ ಶುಶ್ರೂಷಕಿಯರು ಮತ್ತು ಇತರೆ ಸಿಬ್ಬಂದಿ ವರ್ಗದವರಿಗೂ ಇನ್ನೂ ಹೆಚ್ಚಿನ ವೇತನ ನೀಡಲು ಸರ್ಕಾರ ನಿರ್ಧರಿಸಿದೆ. ಎನ್‌ಆರ್‌ಎಚ್‌ಎಂ ಸೇರಿದಂತೆ ವಿವಿಧ ತಾತ್ಕಾಲಿಕ ಹುದ್ದೆಗಳಲ್ಲಿರುವ ಎಲ್ಲರಿಗೂ ಸಮಾನ ವೇತನವಾದ 17,500 ರೂ. ವೇತನ ನೀಡುವ ಚಿಂತನೆ ಇದೆ. ಸಿಬ್ಬಂದಿ ಕಾಯಂಗೊಳಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಿಂದೆ 2009 ರಲ್ಲಿ ನಾನು ಆರೋಗ್ಯ ಸಚಿವನಾಗಿದ್ದಾಗ 100 ಹಾಸಿಗೆಗಳ ಆಸ್ಪತ್ರೆ ಉದ್ಘಾಟಿಸಿದ್ದೆ. ಅಂದು ಡಿ. ಸುಧಾಕರ್‌ ಶಾಸಕರಾಗಿದ್ದರು. 10 ವರ್ಷಗಳ ನಂತರ ಮತ್ತೆ ಆರೋಗ್ಯ ಸಚಿವನಾಗಿ 30 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲು ಸಂತೋಷವಾಗುತ್ತಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿ ಜೊತೆಗೆ ಸುಸಜ್ಜಿತ ಪ್ರಯೋಗಾಲಯ, ರಕ್ತ ಪರೀಕ್ಷೆ ಕೇಂದ್ರ ಸೇರಿದಂತೆ ಎಲ್ಲಾ ಸೌಲಭ್ಯವನ್ನು ಶೀಘ್ರದಲ್ಲೇ ನೀಡುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಸರ್ಕಾರ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಒದಗಿಸಿಕೊಟ್ಟಿದೆ. ಯಾವುದೇ ರೋಗಿ ತೊಂದರೆಗೆ ಸಿಲುಕದಂತೆ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಉತ್ತಮ ಚಿಕಿತ್ಸೆ ನೀಡುವ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಕ್ಷೇತ್ರದಲ್ಲಿ ಜಿಟಿಟಿಸಿ, ಇಂಜಿನಿಯರಿಂಗ್‌, ಖಾಸಗಿ ಬಸ್‌ನಿಲ್ದಾಣ ಮುಂತಾದ ಕಾಮಗಾರಿಗಳ ಉದ್ಘಾಟನೆಯನ್ನು ಸಚಿವ ಶ್ರೀರಾಮುಲು ನೆರವೇರಿಸಬೇಕಿದೆ.

ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಸದಸ್ಯರಾದ ಪ್ರಕಾಶಮೂರ್ತಿ, ಆನಂದ್‌, ಎನ್‌.ಓಬಳೇಶ್‌, ಓ.ಮಂಜುನಾಥ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ, ನಗರಸಭಾ ಸದಸ್ಯರಾದ ಎಸ್‌. ಜಯಣ್ಣ, ವೆಂಕಟೇಶ್‌, ಪಾಲಮ್ಮ, ರಮೇಶ್‌ ಗೌಡ, ವೈ. ಪ್ರಕಾಶ್‌, ವಿರೂಪಾಕ್ಷಿ, ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ, ಆಡಳಿತಾಧಿಕಾರಿ ಡಾ| ಬಸವರಾಜು, ಮಂಜಪ್ಪ, ಅಮಿತ್‌ ಗುಪ್ತ, ಜಯಲಕ್ಷ್ಮೀ, ಶಮಾ ಪರ್ವಿನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.