ಪರಶುರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರವಿನ್ನು ಕೋವಿಡ್-19 ಆಸ್ಪತ್ರೆ
Team Udayavani, Apr 27, 2020, 4:54 PM IST
ಚಳ್ಳಕೆರೆ: ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ಕೋವಿಡ್-19 ಚಿಕಿತ್ಸಾ ಕೇಂದ್ರದ ಪರಿಶೀಲನೆ ನಡೆಸಿದರು.
ಚಳ್ಳಕೆರೆ: ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲೂಕಿನ ಗಡಿ ಭಾಗದಲ್ಲಿರುವ ಪರಶುರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೋವಿಡ್-19 ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ.
ಏ. 27 ರಿಂದ ಇಲ್ಲಿ ಕೋವಿಡ್ ವೈರಾಣುವಿಗೆ ಸಂಬಂಧಪಟ್ಟ ಚಿಕಿತ್ಸೆ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ತಿಳಿಸಿದ್ದಾರೆ. ಕೋವಿಡ್-19 ಚಿಕಿತ್ಸಾ ಕೇಂದ್ರದ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪರಶುರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಧ್ರ ಪ್ರದೇಶದ ಗಡಿ ವ್ಯಾಪ್ತಿಯ ಅನೇಕ ಗ್ರಾಮಗಳ ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಈ ಭಾಗದಲ್ಲಿ ಕೋವಿಡ್ ವೈರಾಣು ಪೀಡಿತ ವ್ಯಕ್ತಿಗಳಿದ್ದಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಬೇಕಿತ್ತು. ಆದ್ದರಿಂದ ಸರ್ಕಾರದ ನಿರ್ದೇಶನದ ಮೇರೆಗೆ ಪರಶುರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ಡಿ. ಚಿದಾನಂದ, ಹಿರಿಯ ಫಾರ್ಮಾಸಿಸ್ಟ್ ಎನ್. ಪ್ರೇಮಕುಮಾರ್, ತಿಪ್ಪೇಸ್ವಾಮಿ, ಡಾ| ರಮೇಶ್, ಡಾ| ಸೋನಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.