ಕೋವಿಡ್ ಸೋಂಕಿತ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ : ಡಿಎಚ್‌ಒ
Team Udayavani, May 27, 2020, 3:50 PM IST
ಚಳ್ಳಕೆರೆ: ಡಿಎಚ್‌ಒ ಡಾ| ಸಿ.ಎಲ್. ಪಾಲಾಕ್ಷ ಬಿಸಿಎಂ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದರು
ಚಳ್ಳಕೆರೆ: ನಗರದ ಹೊರವಲಯದ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ನಲ್ಲಿರುವ ಉತ್ತರಪ್ರದೇಶ ಮೂಲದ 20 ವಲಸೆ ಕಾರ್ಮಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಎಲ್ಲಾ ಕಾರ್ಮಿಕರನ್ನು ಪ್ರತ್ಯೇಕವಾಗಿಟ್ಟು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ತಿಳಿಸಿದರು.
ಮಂಗಳವಾರ ಬಿಸಿಎಂ ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ನಮ್ಮ ಜಿಲ್ಲೆಯ ಯಾವ ಭಾಗದಲ್ಲೂ ಕೋವಿಡ್ ವೈರಾಣು ಗೋಚರಿಸಿಲ್ಲ. ಆದರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ಬಂದವರ ಆರೋಗ್ಯವನ್ನು ಪರಿಶೀಲನೆ ನಡೆಸಿದಾಗ ಅವರಲ್ಲಿ ಪಾಸಿಟಿವ್ ಇರುವುದು ಕಂಡು ಬಂದಿದೆ. ಈಗಾಗಲೇ ಕ್ವಾರಂಟೈನ್‌ನಲ್ಲಿದ್ದ ಮೂವರಲ್ಲಿ ಕೋವಿಡ್ ಪಾಸಿಟಿವ್ ಇದ್ದು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಸ್ತುತ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ 20 ಜನರನ್ನು ವಿಶೇಷ ಕೊಠಡಿಯಲ್ಲಿಟ್ಟು ಚಿಕಿತ್ಸೆ ನೀಡಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ಮಾಹಿತಿ ನೀಡಿ, ನಗರದ ವಿವಿಧ ಭಾಗಗಳಲ್ಲಿ ಕ್ವಾರಂಟೈನ್ ನಲ್ಲಿರುವ ಎಲ್ಲರಿಗೂ ಅಗತ್ಯವಿರುವ ಚಿಕಿತ್ಸೆ, ಊಟ, ಉಪಚಾರದ ಜೊತೆಗೆ ಮಾಸ್ಕ್, ಹ್ಯಾಂಡ್‌ಗ್ಲೌಸ್ ಹಾಗೂ ಸ್ಯಾನಿಟೈಸರ್‌ಗಳನ್ನು ನೀಡಲಾಗಿದೆ. ಪ್ರತಿನಿತ್ಯ ವೈದ್ಯರು ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದು ಹೇಳಿದರು. ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ತಾಪಂ ಇಒ ಡಾ| ಶ್ರೀಧರ್ ಐ. ಬಾರಕೇರ್, ಸಿಎಂಒ ಡಾ| ಬಸವರಾಜು, ಆರ್‌ಆರ್‌ಟಿ ತಂಡದ ಮುಖ್ಯಸ್ಥ ಪ್ರಸನ್ನಕುಮಾರ್, ನಾಗರಾಜ, ಚಂದ್ರಪ್ಪ, ಗಂಗಾಧರ, ಎಸ್.ಬಿ.ತಿಪ್ಪೇಸ್ವಾಮಿ, ಎನ್. ಪ್ರೇಮಕುಮಾರ್, ಎಚ್. ತಿಪ್ಪೇಸ್ವಾಮಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.