ನಿರಾಶ್ರಿತರ ಆರೋಗ್ಯ ತಪಾಸಣೆ
Team Udayavani, Apr 19, 2020, 1:28 PM IST
ಚಳ್ಳಕೆರೆ: ನಗರದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿರುವ ನಿರಾಶ್ರಿತರ ಆರೋಗ್ಯ ತಪಾಸಣೆ ನಡೆಸಲಾಯಿತು.
ಚಳ್ಳಕೆರೆ: ಕಳೆದ ಮೂರು ದಿನಗಳಿಂದ ನಗರದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸವಾಗಿರುವ ನಿರಾಶ್ರಿತರ ಆರೋಗ್ಯ ತಪಾಸಣೆಯನ್ನು ಶನಿವಾರ ನಡೆಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ, ಮೊಳಕಾಲ್ಮೂರು ಸಮಾಜ ಕಲ್ಯಾಣಾಧಿಕಾರಿ ಗುರುಮೂರ್ತಿ, ಚಳ್ಳಕೆರೆ ತಾಲೂಕು ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಾಲತಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಬಸವರಾಜು, ಡಾ| ವೆಂಕಟೇಶ್, ಡಾ| ಶಮಾ ಪರ್ವಿನ್, ಆರೋಗ್ಯ ಇಲಾಖೆಯ ಎನ್. ಪ್ರೇಮಕುಮಾರ್, ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ಇದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನೀಡಿದ ಕೊಬ್ಬರಿ ಎಣ್ಣೆ, ಸೋಪು ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.
ಡಾ| ಎನ್. ಪ್ರೇಮಸುಧಾ ಮಾತನಾಡಿ, ಒಟ್ಟು 7 ಜನ ಗರ್ಭಿಣಿಯರಿದ್ದು, ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸಂಪರ್ಕಿಸುವಂತೆ ಮನವಿ ಮಾಡಿದರು. ಎರಡು ಬಾರಿ ಎಲ್ಲರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಕೆಲವರಿಗೆ ಮಾತ್ರ ತಲೆನೋವು, ಇನ್ನಿತರೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವರಿಗೆ ಮಾತ್ರೆಗಳನ್ನು ವಿತರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.